
ಪ್ರಜಾವಾಣಿ ವಾರ್ತೆ
ಸುಂಟಿಕೊಪ್ಪ: ಇಲ್ಲಿನ ಪೊಲೀಸ್ ಠಾಣೆಯ ವತಿಯಿಂದ ಹೋಬಳಿ ವ್ಯಾಪ್ತಿಯ ಕಾಫಿ ಬೆಳೆಗಾರರ ಮತ್ತು ಮಾಲೀಕರ ಸಭೆಯನ್ನು ಪೊಲೀಸ್ ಠಾಣಾ ಸಭಾಂಗಣದಲ್ಲಿ ಪಿಎಸ್ಐ ಮೋಹನ್ ರಾಜ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಪಿಎಸ್ಐ ಮೋಹನ್ ರಾಜ್ ಅವರು, ಈ ವ್ಯಾಪ್ತಿಯ ಹಲವು ತೋಟಗಳಲ್ಲಿ ಹೊರರಾಜ್ಯದ ಕೂಲಿಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು, ಅವರ ಸಂಪೂರ್ಣ ಮಾಹಿತಿಯನ್ನು ಕೂಡಲೇ ಠಾಣೆಗೆ ತಲುಪಿಸುವಂತೆ ಹಾಗೂ ಅಂತಹ ಕಾರ್ಮಿಕರ ಬಗ್ಗೆ ನಿಗಾವಹಿಸುವಂತೆ, ಅವರ ಭಾವಚಿತ್ರ ಹಾಗೂ ದಾಖಲಾತಿಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ಸೂಚಿಸಿದರಲ್ಲದೇ, ತೋಟಗಳಲ್ಲಿ ಕೆಲಸ ಮಾಡುವ ಸಂದರ್ಭ ಎಚ್ಚರ ವಹಿಸಬೇಕು. ಅನುಮಾನಾಸ್ಪದವಾಗಿ ಕಂಡುಬಂದಲ್ಲಿ ಕೂಡಲೇ ಠಾಣೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದರು.
ಪೊಲೀಸ್ ಠಾಣೆಯ ಎಎಸ್ಐಗಳು, ಸಿಬ್ಬಂದಿ ಇದ್ದರು.