ADVERTISEMENT

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ?

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 4:55 IST
Last Updated 25 ಜೂನ್ 2022, 4:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಶನಿವಾರ ಭೂಮಿ ಕಂಪಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸಂಪಾಜೆ, ಕರಿಕೆ, ಚೆಂಬು, ಪೆರಾಜೆ ಭಾಗದಲ್ಲಿ ಬೆಳಿಗ್ಗೆ 9.10 ರಲ್ಲಿ ಸುಮಾರು 3 ಸೆಕೆಂಡ್ ಗಳ ಕಂಪನದ ಅನುಭವ ಆಗಿದೆ ಎಂದು ಸ್ಥಳೀಯರು ಇಲ್ಲಿನ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ನೆಲದೊಳಗಿಂದ ವಿಚಿತ್ರವಾದ ಶಬ್ದವೂ ಬಂದಿದೆ ಎನ್ನಲಾಗಿದೆ.

ಘಟನೆ ಕುರಿತು ಪರಿಶೀಲನೆಗಾಗಿ ಕಂದಾಯ ಇಲಾಖೆಯ ತಂಡವು ಸ್ಥಳಕ್ಕೆ ತೆರಳಿದೆ.

ಈ ಕುರಿತು ಪ್ರಜಾವಾಣಿ ಗೆ ಪ್ರತಿಕ್ರಿಯಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ತಜ್ಞ ಅನನ್ಯ ವಾಸುದೇವ್, 'ಭೂಕಂಪ ಆಗಿರುವ ಕುರಿತು ಇನ್ನೂ ದೃಢಪಟ್ಟಿಲ್ಲ. ಭೂಮಿ ಕಂಪಿಸಿದೆ ಎಂದು ಜನರು ಮಾಹಿತಿ ನೀಡಿದ್ದಾರೆ. ರಿಕ್ಟರ್ ಮಾಪಕದ ಮಾಹಿತಿಯನ್ನು ವಿಶ್ಲೇಷಿಸಲಾಗುತ್ತಿದೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.