ADVERTISEMENT

ಸೈನಿಕಶಾಲೆ: ತರಬೇತಿ ಕಾರ್ಯಾಗಾರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 6:09 IST
Last Updated 4 ನವೆಂಬರ್ 2025, 6:09 IST
ಮಡಿಕೇರಿ ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ನಡೆಸುವ ತರಬೇತಿ ಕಾರ್ಯಾಗಾರಕ್ಕೆ ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ಚಾಲನೆ ನೀಡಿದರು
ಮಡಿಕೇರಿ ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ನಡೆಸುವ ತರಬೇತಿ ಕಾರ್ಯಾಗಾರಕ್ಕೆ ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ಚಾಲನೆ ನೀಡಿದರು   

ಮಡಿಕೇರಿ: ‘ಸೈನಿಕ ಶಾಲೆ ಎಂಬುದು ಕೇವಲ ಶಾಲೆಯಲ್ಲ. ಅದು ಶಿಸ್ತು, ದೇಶಭಕ್ತಿ, ನಾಯಕತ್ವ ಮತ್ತು ನಂಬಿಕೆಯ ಪಾಠಗಳನ್ನು ಕಲಿಸುವ ಪುಣ್ಯಸ್ಥಳ’ ಎಂದು ರೋಟರಿ ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ಹೇಳಿದರು.

ನಗರದ ಶಿಶುಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ರೋಟರಿ ಮಿಸ್ಟಿ ಹಿಲ್ಸ್ ಮತ್ತು ವಿವೇಕಾನಂದ ಯೂತ್ ಮೂವ್ ಮೆಂಟ್ ವತಿಯಿಂದ ಆಯೋಜಿಸಿದ್ದ ಸೈನಿಕಶಾಲೆ ಸೇರಲಿಚ್ಚಿಸುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಶಿಬಿರ ಕೇವಲ ಪರೀಕ್ಷೆಗೆ ತಯಾರಿ ಮಾತ್ರವಲ್ಲ ಇದು ಶಿಸ್ತು, ಧೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸುವ ವೇದಿಕೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಯಾಯ೯ಗಾರದ ಮೂಲಕ ಮಹತ್ವದ ಹೆಜ್ಜೆ ಹಾಕಿದ್ದೀರಿ. ಆಯೋಜಕ ಸಂಸ್ಥೆಯ ಕಾರ್ಯ ಶ್ಲಾಘನೀಯ’ ಎಂದು ಅಭಿನಂದಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ಏರ್ ಕಮೋಡರ್ ಜೈಸಿಂಹ, ಭಾರತೀಯ ವಾಯು ಪಡೆಗಳ ಮಹತ್ವ ಮತ್ತು ಈ ಸೇನಾ ಪಡೆಗಳಿಗೆ ಸೇರ್ಪಡೆ ಸಂಬಂಧಿತ ಮಾಹಿತಿ ನೀಡಿದರು.

ಸರಗೂರು ಸೈನಿಕ ಶಾಲೆಯ ಆಡಳಿತ ಮಂಡಳಿ ಪ್ರಮುಖ ಪ್ರವೀಣ್ ಮಾತನಾಡಿದರು. ಕುನಾಲ್ ಕಡ್ತರೆ ಮತ್ತು ಪ್ರವೀಣ್ ಕಡ್ತರೆ, ಗಣಿತ ಮತ್ತು ಸಾಮಾಜಿಕ ಜ್ಞಾನದ ವಿಷಯ ಮಾಹಿತಿ ನೀಡಿದರು.

ಸಂಚಾಲಕ ರೋಟರಿ ಮಿಸ್ಟಿ ಹಿಲ್ಸ್‌ನ ಚೆರಿಯಮನೆ ಪ್ರಶಾಂತ್ ಮಾತನಾಡಿ, ‘ಮುಂದಿನ 10 ಭಾನುವಾರಗಳಂದು ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ’ ಎಂದರು.

ಮಿಸ್ಟಿ ಹಿಲ್ಸ್ ಅಧ್ಯಕ್ಷ ರತ್ನಾಕರ್ ರೈ, ಕಾರ್ಯದರ್ಶಿ ಬಿ.ಕೆ.ಕಾರ್ಯಪ್ಪ, ನಿರ್ದೇಶಕರಾದ ಬಿ.ಕೆ.ರವಿಂದ್ರ ರೈ, ಪ್ರಸಾದ್ ಗೌಡ, ಪ್ರಕಾಶ್ ಪೂವಯ್ಯ, ಪಿ.ವಿ.ಅಶೋಕ್ ಹಾಜರಿದ್ದರು.


Cut-off box - ಅರ್ಜಿ ಸಲ್ಲಿಕೆ: 9ರಂದು ಕೊನೆ ದಿನ ಸೈನಿಕಶಾಲೆಗಳಿಗೆ 6 ಮತ್ತು 9 ನೇ ತರಗತಿಗೆ ಸೇರ್ಪಡೆಯಾಗಲು ಅರ್ಜಿ ಸಲ್ಲಿಸಲು ನ.9ರವರೆಗೆ ಅವಕಾಶ ಕಲ್ಪಿಸಲಾಗಿದೆ. ಅ.30ಕ್ಕೆ ಕೊನೆಗೊಂಡಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ಇದೀಗ ನ.9 ರವರೆಗೆ ವಿಸ್ತರಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಎಸ್.ವಿ.ವೈ.ಎಂ. ಪ್ರಮುಖರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.