ADVERTISEMENT

ರಾಜ್ಯ ನಾಯಕರು ನೀಡಿರುವ ಪಟ್ಟಿಗೆ ಮನ್ನಣೆ ಸಿಗಲ್ಲ: ರಂಜನ್‌

ಕೆಲಸ ಮಾಡದ ಸಚಿವರನ್ನು ಕೈಬಿಡುವಂತೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 15:06 IST
Last Updated 20 ನವೆಂಬರ್ 2020, 15:06 IST
ಎಂ.ಪಿ.ಅಪ್ಪಚ್ಚು ರಂಜನ್‌
ಎಂ.ಪಿ.ಅಪ್ಪಚ್ಚು ರಂಜನ್‌   

ಮಡಿಕೇರಿ: ‘ಕೆಲಸ ಮಾಡದ ಸಚಿವರನ್ನು ಕೈಬಿಟ್ಟು, ಮೂಲ ಬಿಜೆಪಿಯ ಹಿರಿಯ ಶಾಸಕರಿಗೆ ಸಂಪುಟ ಪುನರ್‌ ರಚನೆಯಲ್ಲಿ ಅವಕಾಶ ನೀಡಬೇಕು’ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ ಶುಕ್ರವಾರ ಇಲ್ಲಿ ಆಗ್ರಹಿಸಿದರು.

‘ನಾಲ್ಕು ಬಾರಿ ಸಚಿವರಾದವರೇ ಮತ್ತೆ ಮತ್ತೆ ಸಚಿವರಾಗುತ್ತಿದ್ದಾರೆ. ನಾನು, ಉಮೇಶ್ ಕತ್ತಿ ಹಲವು ಬಾರಿ ಗೆದ್ದಿದ್ದೇವೆ. ನಮಗೂ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯ ಮುಖಂಡರು ನೀಡಿರುವ ಪಟ್ಟಿಯನ್ನು ಹೈಕಮಾಂಡ್ ಪರಿಗಣಿಸುವುದಿಲ್ಲ. ಹಿಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯದಿಂದ ಕಳುಹಿಸಿದ್ದ ಪಟ್ಟಿಗೆ ಮನ್ನಣೆ ಸಿಕ್ಕಿಲ್ಲ. ಹೈಕಮಾಂಡ್, ಈಗಲೂ ಮೂಲ ಬಿಜೆಪಿ ಶಾಸಕರನ್ನು ಕೈಬಿಡದೇ ಪರಿಗಣಿಸಲಿದೆ ಎಂಬ ವಿಶ್ವಾಸವಿದೆ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.