
ಪ್ರಜಾವಾಣಿ ವಾರ್ತೆ
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅಧೀನದಲ್ಲಿರುವ ಸರ್ಕಾರಿ ಕಟ್ಟಡ ಮದ್ಯವ್ಯಸನಿಗಳ ತಾಣವಾಗಿರುವ ಕುರಿತು ಶೀಘ್ರವೇ ವರದಿ ನೀಡುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಸೂಚಿಸಿದ್ದಾರೆ.
‘ಪ‍್ರಜಾವಾಣಿ’ ಜೂನ್ 11ರಂದು ಪ್ರಕಟವಾಗಿದ್ದ ವಿಶೇಷ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಈ ಕುರಿತು ಪರಿಶೀಲಿಸುವಂತೆ ಅವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರಿಗೆ ನಿರ್ದೇಶನ ನೀಡಿದ್ದಾರೆ. ಕೂಡಲೇ ಕಟ್ಟಡವನ್ನು ಪರಿಶೀಲಿಸಿ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.