ADVERTISEMENT

ಇಂದು ಮತ್ತು ನಾಳೆ ಸಚಿವ ಭೋಸರಾಜು ಜಿಲ್ಲೆಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 7:34 IST
Last Updated 25 ಜನವರಿ 2026, 7:34 IST
<div class="paragraphs"><p>ಎನ್.ಎಸ್. ಭೋಸರಾಜು</p></div>

ಎನ್.ಎಸ್. ಭೋಸರಾಜು

   

ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಎನ್.ಎಸ್.ಭೋಸರಾಜು ಅವರು ಜ. 25ರಂದು ಸಂಜೆ 7 ಗಂಟೆಗೆ ನಗರಕ್ಕೆ ಭೇಟಿ ನೀಡಿ ತಂಗಲಿದ್ದಾರೆ.

26ರಂದು ಬೆಳಿಗ್ಗೆ 9 ಗಂಟೆಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ 11 ಗಂಟೆಗೆ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.