ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಅವರು ಭಾನುವಾರ ಮಳೆ ಹಾನಿ ವೀಕ್ಷಣೆ ವೇಳೆ ಸೋಮವಾರಪೇಟೆ ತಾಲ್ಲೂಕಿನ ಮಲ್ಲಳ್ಳಿ ಜಲಪಾತಕ್ಕೂ ಭೇಟಿ ನೀಡಿದರು.
ಮಲ್ಲಹಳ್ಳಿ ಫಾಲ್ಸ್‌ಗೆ ಮೂಲಸೌಕರ್ಯ ಒದಗಿಸಬೇಕು ಹಾಗೂ ಮಳೆಯಿಂದ ಹಾನಿಯಾದ ಸೇತುವೆಯನ್ನು ಬೇಗನೆ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾನುವಾರವಷ್ಟೇ ‘ಪ್ರಜಾವಾಣಿ’ ‘ಜಲಪಾತ ದರ್ಶನ’ ಸರಣಿಯಲ್ಲಿ ‘ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಈ ಸ್ಥಳ ಇಂದಿಗೂ ಮೂಲಸೌಕರ್ಯದ ಕೊರತೆ ಎದುರಿಸುತ್ತಿದೆ’ ಎಂದು ವರದಿ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.