
ಗೋಣಿಕೊಪ್ಪಲು ಪಟ್ಟಣದಲ್ಲಿ ಪೌರಕಾರ್ಮಿಕರು ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಭಾನುವಾರ ಪ್ರತಿಭಟನೆ ನಡೆಸಿದರು
ಗೋಣಿಕೊಪ್ಪಲು: ಪೊನ್ನಂಪೇಟೆ ಹಾಗೂ ಗೋಣಿಕೊಪ್ಪಲು ಪಟ್ಟಣದ ಪೌರಕಾಮಿಕರು ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಭಾನುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಪೌರಕಾರ್ಮಿಕ ಸಂಘದ ಅಧ್ಯಕ್ಷ ರಾಜು, ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ್, ಪೌರ ಕಾರ್ಮಿಕ ಗಣೇಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
‘ಬಡವರು, ಕೂಲಿಕಾರ್ಮಕರು ಮತ್ತು ಪೌರಕಾರ್ಮಿಕರ ಪರವಾಗಿ ಧ್ವನಿ ಎತ್ತುವ ಶಾಸಕ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಿದರೆ ಸಮಾಜದ ತಳ ವರ್ಗದವರಿಗೆ ಸಹಾಯವಾಗುತ್ತದೆ. ಜತೆಗೆ ಜಿಲ್ಲೆಯ ಅಭಿವೃದ್ಧಿಗೂ ಅನುಕೂಲವಾಗಲಿದೆ. ಅಂತಹ ಪ್ರಾಮಾಣಿಕ ರಾಜಕಾರಣಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.