ADVERTISEMENT

ಸುಂಟಿಕೊಪ್ಪ | ಬಾಲಕಿಯೊಂದಿಗೆ ಅಸಭ್ಯ ವರ್ತನೆ; ನಾಲ್ವರು ಯುವಕರ ಬಂಧನ

​ಪ್ರಜಾವಾಣಿ ವಾರ್ತೆ
Published 18 ಜನವರಿ 2024, 13:44 IST
Last Updated 18 ಜನವರಿ 2024, 13:44 IST
ಬಂಧನ (ಸಾಂದರ್ಭಿಕ ಚಿತ್ರ)
ಬಂಧನ (ಸಾಂದರ್ಭಿಕ ಚಿತ್ರ)   

ಸುಂಟಿಕೊಪ್ಪ: ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ನಾಲ್ವರು ಯುವಕರನ್ನು ಪೊಲೀಸರು ಬಂಧಿಸಿ  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಶಾಲಾ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ ಅವರನ್ನು ಚುಡಾಯಿಸಿದ ಹಿನ್ನೆಲೆಯಲ್ಲಿ ಆಕೆ ಭಯದಿಂದ ಕಿರುಚಾಡಿದ್ದಾಳೆ.

ಇದೇ ಸಂದರ್ಭ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸಾರ್ವಜನಿಕರಿಂದ ಮಾಹಿತಿ ಪಡೆದು ನಾಲ್ವರು ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಪೋಕ್ಸೊ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.