ಸೋಮವಾರಪೇಟೆ: ಕುಶಾಲನಗರದ ಉದ್ಯಮಿಯೊಬ್ಬರ ಕಾರು ನೆರೆಯ ಸಕಲೇಶಪುರ ತಾಲ್ಲೂಕಿನ ಮಾಗೇರಿ ಸಮೀಪದ ಕಲ್ಲಹಳ್ಳಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಪತ್ತೆಯಾಗಿದ್ದು, ಕಾರಿನ ಒಳಗೆ ರಕ್ತದ ಕಲೆಗಳು ಕಂಡು ಬಂದಿವೆ. ಯಸಳೂರು ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದು ಕುಶಾಲನಗರದಲ್ಲಿ ಉದ್ಯಮಿಯಾಗಿರುವ ಜಾನ್ ಎಂಬುವವರಿಗೆ ಸೇರಿದ್ದ ಕಾರು. ಅವರು ತಮ್ಮ ಸ್ನೇಹಿತ ಮೂಲತಃ ಸೋಮವಾರಪೇಟೆ ಕಕ್ಕೆಹೊಳೆ ಜಂಕ್ಷನ್ ಸಮೀಪದ ನಿವಾಸಿ, ಪ್ರಸ್ತುತ ಕುಶಾಲನಗರದಲ್ಲಿ ವಾಸವಿರುವ ಸಂಪತ್ (ಶಂಭು) ಎಂಬುವವರಿಗೆ ಕಾರು ನೀಡಿದ್ದು, ಈಗ ಕಾರು ಮಾತ್ರ ಪತ್ತೆಯಾಗಿದ್ದು, ಸಂಪತ್ ನಾಪತ್ತೆಯಾಗಿದ್ದಾರೆ ಎಂದು ಕುಶಾಲನಗರ ಠಾಣೆಗೆ ದೂರು ನೀಡಿದ್ದಾರೆ.
‘ತನಿಖೆ ಕೈಗೊಳ್ಳಲಾಗಿದ್ದು, ಸಂಪತ್ ಅವರಿಗಾಗಿ ಹುಡುಕಾಟ ಮುಂದುವರಿದಿದೆ. ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.