ADVERTISEMENT

ಮಡಿಕೇರಿ | ಸಚಿವ ರಾಮಲಿಂಗಾರೆಡ್ಡಿ ಭೇಟಿ ಮಾಡಲು ಶಾಸಕ ಸಮ್ಮತಿ

ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 6:04 IST
Last Updated 1 ಜುಲೈ 2025, 6:04 IST
ಮಡಿಕೇರಿಯ ಓಂಕಾರೇಶ್ವರ ದೇಗುಲಕ್ಕೆ ಭೇಟಿ ನೀಡಿದ ಶಾಸಕ ಡಾ.ಮಂತರ್‌ಗೌಡ ದೀಪ ಬೆಳಗಿಸಿದರು
ಮಡಿಕೇರಿಯ ಓಂಕಾರೇಶ್ವರ ದೇಗುಲಕ್ಕೆ ಭೇಟಿ ನೀಡಿದ ಶಾಸಕ ಡಾ.ಮಂತರ್‌ಗೌಡ ದೀಪ ಬೆಳಗಿಸಿದರು   

ಮಡಿಕೇರಿ: ಇಲ್ಲಿನ ಐತಿಹಾಸಿಕ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಕೋರಲು ಮುಜಾರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಲು ಶಾಸಕ ಡಾ.ಮಂತರ್‌ಗೌಡ ಸಮ್ಮತಿಸಿದರು.

ದೇಗುಲಕ್ಕೆ ಭೇಟಿ ನೀಡಿದ ಅವರನ್ನು ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ಹಾಗೂ ಪದಾಧಿಕಾರಿಗಳು ಮುಜಾರಾಯಿ ಸಚಿವರ ಬಳಿಗೆ ನಿಯೋಗ ತೆರಳುವ ಇಂಗಿತವನ್ನು ವ್ಯಕ್ತಪಡಿಸಿದರು.

ಇದಕ್ಕೆ ಒಪ್ಪಿದ ಮಂತರ್‌ಗೌಡ, ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಅನುದಾನ ಪಡೆಯಲು ತಮ್ಮ ಸಂಪೂರ್ಣ ಸಹಕಾರವಿದೆ ಎಂದು ಭರವಸೆ ನೀಡಿದರು.

ADVERTISEMENT

ದೇವಾಲಯಕ್ಕೆ ಬರುವ ಭಕ್ತರಿಗೆ ದೇವಾಲಯ ವ್ಯವಸ್ಥಾಪನಾ ಸಮಿತಿಯಿಂದ ಅನುಕೂಲಕರ ವ್ಯವಸ್ಥೆಗಳನ್ನು ಕಲ್ಪಿಸಬೇಕು. ದೇವಾಲಯದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ದೇವಾಲಯದ ಸಾಂಪ್ರದಾಯಿಕ ಉತ್ಸಾವಾದಿಗಳನ್ನು ಕಾಲಕಾಲಕ್ಕೆ ತಕ್ಕಂತೆ ನಡೆಸಿಕೊಂಡು ಹೋಗಬೇಕು ಎಂದು ಅವರು ತಿಳಿಸಿದರು.

ಸಮಿತಿಯ ಸದಸ್ಯರಾದ ಜಿ.ರಾಜೇಂದ್ರ, ಎ.ಎಸ್.ಪ್ರಕಾಶ್, ಆಂಜನೇಯ ದೇವಾಲಯದ ಅರ್ಚಕ ಎಂ.ಬಿ.ಸಂತೋಷ್ ಹಾಗೂ  ಓಂಕಾರೇಶ್ವರ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.