ADVERTISEMENT

ಮಡಿಕೇರಿ: ಅಪಘಾತದಿಂದ ಗಾಯಗೊಂಡವರಿಗೆ ನೆರವಾದ ಶಾಸಕ ಪೊನ್ನಣ್ಣ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 4:19 IST
Last Updated 17 ಫೆಬ್ರುವರಿ 2026, 4:19 IST
ಪೊನ್ನಣ್ಣ
ಪೊನ್ನಣ್ಣ   

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಗೋಣಿಕೊಪ್ಪಲು ಸಮೀಪ ಅಪಘಾತಕ್ಕೆ ತುತ್ತಾಗಿ ಗಾಯಗೊಂಡು ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್‌.ಪೊನ್ನಣ್ಣ ಅವರು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ಪೊನ್ನಣ್ಣ ಅವರು ಬೆಂಗಳೂರಿಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಗಾಯಗೊಂಡಿದ್ದ ವ್ಯಕ್ತಿಯನ್ನು ಗಮನಿಸಿ ಕಾರಿನಿಂದ ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿದರು. ಈ ವೇಳೆ ಪೊನ್ನಣ್ಣ ರಸ್ತೆ ಸಂಚಾರವನ್ನೂ ನಿಯಂತ್ರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT