ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿನ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿದರು.
ದಿನೇಶ್ ಗುಂಡೂರಾವ್ ಅವರ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾದ ಪೊನ್ನಣ್ಣ ಸುದೀರ್ಘ ಚರ್ಚೆ ನಡೆಸಿದರು. ಆರೋಗ್ಯ ಸೇವೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಚಿವರಲ್ಲಿ ಹಲವು ಬೇಡಿಕೆಗಳ ಮನವಿ ಸಲ್ಲಿಸಿದರು.
ವಿಶೇಷವಾಗಿ, ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳ ಮೇಲ್ದರ್ಜೆಗೆ ಬಜೆಟ್‌ನಲ್ಲಿ ಅನುಮೋದನೆ ದೊರಕಿದೆ. ಅದೇ ರೀತಿ ಸಮುದಾಯ ಆರೋಗ್ಯ ಕೇಂದ್ರಗಳ ಬಗ್ಗೆ ಹಾಗೂ ವೈದ್ಯರುಗಳ ಕೊರತೆಯ ಬಗ್ಗೆ ಸಚಿವರ ಗಮನ ಸೆಳೆದಾಗ, ಕೂಡಲೇ ಖಾಲಿ ಇರುವ ಸ್ಥಾನಗಳನ್ನು ತುಂಬಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂ ಹಲವು ಬೇಡಿಕೆಗಳನ್ನು ಹಂತಹಂತವಾಗಿ ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿಸಚಿವರು ಭರವಸೆ ನೀಡಿದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.