ADVERTISEMENT

ಕೂತಿ: ಭೂ ಕುಸಿತ ಸ್ಥಳಕ್ಕೆ ಶಾಸಕ ಮಂತರ್ ಗೌಡ ಭೇಟಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 13:43 IST
Last Updated 1 ಜೂನ್ 2025, 13:43 IST
ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಭೂಕುಸಿತದ ಪ್ರದೇಶಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು
ಸೋಮವಾರಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಭೂಕುಸಿತದ ಪ್ರದೇಶಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು   

ಸೋಮವಾರಪೇಟೆ: ತಾಲ್ಲೂಕಿನ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಭೂ ಕುಸಿತವಾದ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಶನಿವಾರ ಭೇಟಿ ನೀಡಿ ಮಾಹಿತಿ ಪಡೆದರು.

ಭೂಕುಸಿತ ಸಂಭವಿಸಿರುವ ಜಾಗದಲ್ಲಿ ತಡೆಗೋಡೆಯನ್ನು ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅರ್ಬಝ್ ಅವರಿಗೆ ಸೂಚಿಸಿದರು.

ಭೂ ಕುಸಿತದಿಂದ ಕಾಫಿ ತೋಟಕ್ಕೆ ಹಾನಿಯಾಗಿದ್ದು, ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ನೀಡುವಂತೆ ತಹಶೀಲ್ದಾರ್ ಕೃಷ್ಣಮೂರ್ತಿ ಅವರಿಗೆ ತಾಕೀತು ಮಾಡಿದರು.

ಗ್ರಾಮದ ದೇವಾಲಯಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ ಅನುದಾನ ಕಲ್ಪಿಸುವಂತೆ ಕೂತಿ ಗ್ರಾಮದ ಅಧ್ಯಕ್ಷ ಎಚ್.ಎಂ.ಜಯರಾಮ್ ಮನವಿ ಮಾಡಿದರು. ಈ ಬಗ್ಗೆ ಶಾಸಕರು ಸೂಕ್ತ ಅನುದಾನ ಕಲ್ಪಿಸುವ ಭರವಸೆ ನೀಡಿದರು.

ADVERTISEMENT

ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಯಾದವ್, ಖಜಾಂಚಿ ಲಕ್ಷ್ಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಗ್ರಾಮಸ್ಥರಾದ ಪ್ರಕಾಶ್, ಜಗದೀಶ್, ಗ್ರಾಮ ಆಡಳಿತ ಅಧಿಕಾರಿ ಕರಿಬಸವರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.