ADVERTISEMENT

ಗೋಣಿಕೊಪ್ಪಲು: ಮುಷ್ಕರ ಕೈಬಿಡಲು ಶಾಸಕ ಪೊನ್ನಣ್ಣ ಮನವಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2024, 4:10 IST
Last Updated 26 ಫೆಬ್ರುವರಿ 2024, 4:10 IST
ಗೋಣಿಕೊಪ್ಪಲು ಬಳಿಯ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಶಾಸಕ ಎ.ಎಸ್.ಪೊನ್ನಣ್ಣ ವಿದ್ಯಾರ್ಥಿ ಮುಖಂಡರಿಂದ ಮನವಿ ಸ್ವೀಕರಿಸಿದರು
ಗೋಣಿಕೊಪ್ಪಲು ಬಳಿಯ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭಾನುವಾರ ಭೇಟಿ ನೀಡಿದ ಶಾಸಕ ಎ.ಎಸ್.ಪೊನ್ನಣ್ಣ ವಿದ್ಯಾರ್ಥಿ ಮುಖಂಡರಿಂದ ಮನವಿ ಸ್ವೀಕರಿಸಿದರು   

ಗೋಣಿಕೊಪ್ಪಲು: ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ 17 ದಿನಗಳಿಂದ ಪೊನ್ನಂಪೇಟೆ ಅರಣ್ಯ ಕಾಲೇಜಿನ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭಾನುವಾರ ಭೇಟಿ ನೀಡಿ, ಮುಷ್ಕರ ಕೈಬಿಡುವಂತೆ ಮನವಿ ಮಾಡಿದರು.

ವಿದ್ಯಾರ್ಥಿಗಳ ಬೇಡಿಕೆ ಆಲಿಸಿದ ಪೊನ್ನಣ್ಣ ಹಿಂದಿನ ರಾಜ್ಯ ಸರ್ಕಾರದ ಅವಧಿಯಲ್ಲಿ ಅರಣ್ಯ ಇಲಾಖೆ ನೇಮಕಾತಿಯಲ್ಲಿ ಕೆಲವು ಬದಲಾವಣೆ ಆಗಿದೆ. ಇದರಿಂದ ಅರಣ್ಯಶಾಸ್ತ್ರ ಪದವೀಧರರಿಗೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಬೇಕು ಎಂಬುದು ವಿದ್ಯಾರ್ಥಿಗಳ ಬೇಡಿಕೆಯಾಗಿದೆ. ಇವರ ಬೇಡಿಕೆ ನ್ಯಾಯೋಚಿತವಾಗಿದ್ದು ಇದನ್ನು ಪರಿಶಿಲಿಸಿ ಬಗೆ ಹರಿಸುವುದಕ್ಕೆ ಸಮಯಾವಕಾಶ ಬೇಕಾಗಿದೆ. ಈ ಬಗ್ಗೆ ಸಬಂಧಪಟ್ಟ ಅಧಿಕಾರಿಗಳು ಮತ್ತು ಸಚವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ 17 ದಿನಗಳಿಂದ ತರಗತಿ ಬಹಿಷ್ಕರಿಸಿ ನಡೆಸುತ್ತಿರುವ ಮುಷ್ಕರಕ್ಕೆ ನಾವೆಲ್ಲರೂ ಹೊಣೆಗಾರರಾಗಬೇಕಾಗಿದೆ. ಅವರ ಬೇಡಿಕೆಯನ್ನು ಅತ್ಯಂತ ಸಹಾನುಭೂತಿಯಿಂದ ಪರಿಶೀಲಿಸಿ ಈಡೇರಿಸಲು ಗಮನಹರಿಸಲಾಗುವುದು. ಅಲ್ಲಿಯವರೆಗೆ ಮುಷ್ಕರ ಹಿಂದಕ್ಕೆ ಪಡೆದು ತರಗತಿಗಳಿಗೆ ತೆರಳಬೇಕು ಎಂದು ತಿಳಿಸಿದರು.

ADVERTISEMENT

ಫೆ.26ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯದ 3 ಅರಣ್ಯ ಕಾಲೇಜುಗಳ ವಿದ್ಯಾರ್ಥಿಗಳು ನಡೆಸಲು ಉದ್ದೇಶಿಸಿರುವ ಮುಷ್ಕರವನ್ನು ಹಿಂದಕ್ಕೆ ಪಡೆಯಬೇಕು. ವಿದ್ಯಾರ್ಥಿ ಮುಖಂಡರು ಬೆಂಗಳೂರಿಗೆ ಬಂದು ಸಚಿವರನ್ನು ಭೇಟಿ ಮಾಡಿ ತಮ್ಮ ಆಹವಾಲು ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದರು.

ಅರಣ್ಯ ಕಾಲೇಜಿನ ಡೀನ್ ಪ್ರೊ.ದೇವಗಿರಿ ಹಾಜರಿದ್ದರು.

17 ದಿನಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಫೆ.26ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮುಷ್ಕರಕ್ಕೆ ತೀರ್ಮಾನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.