ಮಡಿಕೇರಿ: ತಾಲ್ಲೂಕಿನ ಮೇಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕೇರಿ- ಬಿಳಿಗೇರಿಯಿಂದ ತೋರಮಣ ಲಿಂಕ್ ರಸ್ತೆ ಹಾಗೂ ಬಿಳಿಗೇರಿ ಶಾದಿಯಾಲ್ ರಸ್ತೆ ₹ 20 ಲಕ್ಷ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಶಾಸಕ ಎ.ಎಸ್.ಪೊನ್ನಣ್ಣ ಮಂಗಳವಾರ ಚಾಲನೆ ನೀಡಿದರು.
ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂರಿಕಾಡು ರಸ್ತೆ ₹ 15 ಲಕ್ಷ ವೆಚ್ಚದ ಕಾಮಗಾರಿಗೂ ಅವರು ಇದೇ ವೇಳೆ ಚಾಲನೆ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಭಾಗವಹಿಸಿದ್ದರು.
ನಂತರ ಅವರು, ತಾಲ್ಲೂಕಿನ ಹುಲಿತಾಳ ಗ್ರಾಮದಲ್ಲಿ ಈಚೆಗೆ ವಿದ್ಯುತ್ ಆಘಾತದಿಂದ ಮೃತಪಟ್ಟ ಎಚ್.ಪಿ.ಪ್ರದೀಪ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ನಂತರ, ಕಗ್ಗೊಡ್ಲು ಬಳಿಯ ಹೂಕಾಡು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಇಲ್ಲಿನ ದೇವಾಲಯ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.
Highlights - ಹೂಕಾಡು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ದೇಗುಲ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.