ಬಂಧನ ( ಸಾಂಕೇತಿಕ ಚಿತ್ರ)
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ 3 ಕೆ.ಜಿ 90 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಕೇರಳ ರಾಜ್ಯದ ಆರೋಪಿಯೊಬ್ಬ ಬಂಧಿತನಾಗಿದ್ದಾನೆ.
‘ವಿರಾಜಪೇಟೆಯ ಪೆರಂಬಾಡಿ ಜಂಕ್ಷನ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ನಿಧಿನ್ (28) ಎಂಬಾತನನ್ನು ಬಂಧಿಸಲಾಗಿದೆ. ಈತನಿಂದ 3 ಕೆ.ಜಿ 90 ಗ್ರಾಂ ಗಾಂಜಾ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆಸಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.
ಡಿವೈಎಸ್‌ಪಿ ಮಹೇಶ್‌ಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸಿಪಿಐ ಅನೂಪ್ ಮಾದಪ್ಪ, ಪಿಎಸ್‌ಐ ಪ್ರಮೋದ್ ಹಾಗೂ ತಂಡ ಭಾಗಿಯಾಗಿತ್ತು.
ನಿಷೇಧಿತ ಮಾದಕ ವಸ್ತುಗಳನ್ನು ಬಳಸುವ, ಸರಬರಾಜು ಮಾಡುವ ಹಾಗೂ ಮಾರಾಟ ಮಾಡುವವರ ಕುರಿತು ಮಾಹಿತಿ ನೀಡಿದರೆ ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡಲಾಗುವುದು. ಸ್ಥಳೀಯ ಪೊಲೀಸ್ ಠಾಣೆ, ಕೆಎಸ್‌ಪಿ ತಂತ್ರಾಂಶದ ಮೂಲಕ ಮಾಹಿತಿ ನೀಡಬಹುದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.