ADVERTISEMENT

ಮಡಿಕೇರಿ: 5 ದಿನದಲ್ಲಿ 500ಕ್ಕೂ ಹೆಚ್ಚು ವಿದ್ಯುತ್ ಕಂಬ ಧರೆಗೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 6:44 IST
Last Updated 31 ಜುಲೈ 2025, 6:44 IST
ಕೊಡಗು ಜಿಲ್ಲೆಯ ಶನಿವಾರಸಂತೆಯ ಮುಳ್ಳೂರಿನಲ್ಲಿ ಮಂಗಳವಾರ ಸುರಿದ ಮಳೆಗೆ ವಿದ್ಯುತ್ ಕಂಬ ಮುರಿದು ಬಿದ್ದಿರುವುದು
ಕೊಡಗು ಜಿಲ್ಲೆಯ ಶನಿವಾರಸಂತೆಯ ಮುಳ್ಳೂರಿನಲ್ಲಿ ಮಂಗಳವಾರ ಸುರಿದ ಮಳೆಗೆ ವಿದ್ಯುತ್ ಕಂಬ ಮುರಿದು ಬಿದ್ದಿರುವುದು   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ 5 ದಿನಗಳಿಂದ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಸುಮಾರು 800 ರಷ್ಟು ವಿದ್ಯುತ್ ಕಂಬಗಳು, ಮರಗಳು ಹಾಗೂ ಮರದ ರೆಂಬೆಕೊಂಬೆಗಳು ಮುರಿದು ಬಿದ್ದು ಹಾನಿಯಾಗಿದೆ.

ಅಪಾರ ಪ್ರಮಾಣದಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿ ಉಂಟಾಗಿ ಬಹುತೇಕ ಎಲ್ಲಾ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನ ಬಹುತೇಕ ಕಡೆ ಬೀಸುತ್ತಿರುವ ವಿಪರೀತ ಗಾಳಿಯಿಂದ ಸೆಸ್ಕ್ ಇಲಾಖೆಯ ಸಿಬ್ಬಂದಿಯವರಿಗೆ ದುರಸ್ತಿ ಕೆಲಸ ನಿರ್ವಹಿಸಲು ತೀರಾ ಹಿನ್ನಡೆ ಉಂಟಾಗಿದೆ.

ADVERTISEMENT

ಕೆಲವೊಂದು ಪ್ರದೇಶಗಳಲ್ಲಿ ಐದಾರು ದಿವಸಗಳಿಂದ ವಿದ್ಯುತ್ ಮರುಜೋಡಣೆ ಬಾಕಿ ಇದ್ದು, ಸೆಸ್ಕ್ ವತಿಯಿಂದ ದುರಸ್ತಿ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗ ವಿದ್ಯುತ್ ಮರುಜೋಡಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.