ADVERTISEMENT

ಕೊಡಗು: ಅಂತೂ, ಇಂತೂ ಮಂಜೂರಾಯಿತು ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ

ಎಂಆರ್‌ಐ ಸ್ಕ್ಯಾನಿಂಗ್ ಯಂತ್ರದ ಕುರಿತು ಸತತವಾಗಿ ವರದಿ ಪ್ರಕಟಿಸಿದ್ದ ‘ಪ್ರಜಾವಾಣಿ’

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2024, 6:13 IST
Last Updated 13 ಮಾರ್ಚ್ 2024, 6:13 IST
ಫೆ. 12ರಂದು ‘ಪ್ರಜಾವಾಣಿ’ಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಬೇಕು ಎಂಬ ವಿಶೇಷ ವರದಿಯನ್ನು ಪ್ರಕಟಿಸಿತ್ತು
ಫೆ. 12ರಂದು ‘ಪ್ರಜಾವಾಣಿ’ಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಬೇಕು ಎಂಬ ವಿಶೇಷ ವರದಿಯನ್ನು ಪ್ರಕಟಿಸಿತ್ತು   

ಮಡಿಕೇರಿ: ಕೊಡಗು ಜಿಲ್ಲೆಯ ಬಹು ದಿನಗಳ ಬೇಡಿಕೆಯಾಗಿದ್ದ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರವನ್ನು ರಾಜ್ಯ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮಂಜೂರು ಮಾಡಿದೆ.

ಇಲ್ಲಿನ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಈ ಕುರಿತು ಪ್ರಸ್ತಾವ ಸಲ್ಲಿಸಿತ್ತು. ಶಾಸಕ ಡಾ.ಮಂತರ್‌ಗೌಡ ಅವರು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಗೆ ಪತ್ರಗಳನ್ನು ಬರೆದು ಗಮನ ಸೆಳೆದಿದ್ದರು. ಸೋಮವಾರ ₹ 10.70 ಕೋಟಿ ಮೊತ್ತದ ಎಂಆರ್‌ಐ ಸ್ಕ್ಯಾನಿಂಗ್‌ ಯಂತ್ರಕ್ಕೆ ಇಲಾಖೆ ಮಂಜೂರಾತಿ ನೀಡಿದೆ.

ಜಿಲ್ಲೆಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಇಲ್ಲದೇ ಜನಸಾಮಾನ್ಯರು ಪರಿತಪಿಸುತ್ತಿರುವ ಕುರಿತು ‘ಪ್ರಜಾವಾಣಿ’ ಸಾಕಷ್ಟು ವರದಿಗಳನ್ನು ಪ್ರಕಟಿಸಿತ್ತು. ತೀರಾ ಈಚೆಗೆ ಫೆ. 4ರಂದು ‘ಕ್ಯಾನ್ಸರ್‌ಗೆ ಚಿಕಿತ್ಸೆ, ಜಿಲ್ಲೆಯಲ್ಲಿ ಮರೀಚಿಕೆ’ ಎಂಬ ಶೀರ್ಷಿಕೆಯಡಿ ಪ್ರಕಟಿಸಿದ್ದ ವಿಶೇಷ ವರದಿಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್‌ಗಾಗಿ ಇಲ್ಲಿನ ಜನರು ಹೊರ ಜಿಲ್ಲೆಗಳನ್ನೆ ಅವಲಂಬಿಸಬೇಕಾದ ಪರಿಸ್ಥಿತಿ ಕುರಿತು ಗಮನ ಸೆಳೆಯಲಾಗಿತ್ತು. ಫೆ. 12ರಂದು ಜಿಲ್ಲೆಗೆ ‘ಎಂಆರ್‌ಐ ಸ್ಕ್ಯಾನಿಂಗ್ ಕೊಡಿ’ ಎಂಬ ಜನಸಾಮಾನ್ಯರ ಮನವಿಯನ್ನೂ ಪ್ರಕಟಿಸಿತ್ತು.

ADVERTISEMENT
ಫೆ. 12ರಂದು ‘ಪ್ರಜಾವಾಣಿ’ಯಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಯಂತ್ರ ಬೇಕು ಎಂಬ ವಿಶೇಷ ವರದಿಯನ್ನು ಪ್ರಕಟಿಸಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.