ಮಡಿಕೇರಿ: ಎಸ್ಎಂಎಸ್ ಶಾಲಾ ಆವರಣದಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮಕ್ಕಳು ಸಂಭ್ರಮಿಸಿದರು.
‘ಇಕೊ ಕ್ಲಬ್’ನ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಎಸ್‌ಎಂಎಸ್ ಅಕಾಡೆಮಿ ಅಧ್ಯಕ್ಷ ಹಾಗೂ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕದನೂರು ಪಂಚಾಯಿತಿ ಸದಸ್ಯ ಸೋಮೆಯಂಡ ರೇಷ ತಿಮ್ಮಯ್ಯ, ಪ್ರಾಂಶುಪಾಲರಾದ ಕುಸುಮ್ ಟಿಟೋ ಕ್ರೀಡಾ ಜ್ಯೋತಿ ಬೆಳಗಿಸುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
3ರಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ಗಂಟೆಯ ಕಾಲ ಓಟದ ಸ್ಪರ್ಧೆ ಹಾಗೂ ಮುಕ್ತ ಆಟಗಳನ್ನು ಆಯೋಜಿಸಲಾಗಿತ್ತು. ನಂತರ, ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದಿಂದ ಆಯ್ಕೆಗೊಂಡ ವಿದ್ಯಾರ್ಥಿಗಳು ವಾಲಿಬಾಲ್, ಥ್ರೋ ಬಾಲ್ , ಓಟದ ಸ್ಪರ್ಧೆ, ಹಗ್ಗ ಜಗ್ಗಾಟ ಹಾಗೂ ರಿಲೇಗಳಲ್ಲಿ ಭಾಗವಹಿಸಿದ್ದರು. ಗ್ರಾಮಸ್ಥರು, ಪೋಷಕರು ಕ್ರೀಡಾಕೂಟ ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.