ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ಶನಿವಾರ ನಡೆದ 31ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ದಂಪತಿ ಓಟ ಸ್ಪರ್ಧೆಯಲ್ಲಿ ದಂಪತಿಗಳು ಓಡಿ ಗಮನ ಸೆಳೆದರು
Mud Games today
ಮಡಿಕೇರಿ: ಭಾಗಮಂಡಲದ ಬಳ್ಳಡ್ಕ ಅಪ್ಪಾಜಿ ಮತ್ತು ಅನು ಅವರ ಗದ್ದೆಯಲ್ಲಿ 33 ನೇ ವರ್ಷದ ರಾಜ್ಯ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ ಕಾರ್ಯಕ್ರಮವು ಆ.23 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಯುವ ಒಕ್ಕೂಟ , ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಶ್ರೀ ಕೃಷ್ಣ ಯೂತ್ ಕ್ಲಬ್ ಅಯ್ಯಂಗೇರಿ ಈ ಕಾರ್ಯಕ್ರಮ ಆಯೋಜಿಸಿದೆ.
ವಿಧಾನಸಭೆಯ ಮಾಜಿ ಅಧ್ಯಕ್ಷರಾದ ಕೆ.ಜಿ.ಬೋಪಯ್ಯ, ಭಾಗಮಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಳನ ರವಿ, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಜಿ ಪುಷ್ಪಾ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಪಾಲ್ಗೊಳ್ಳಲಿದ್ದಾರೆ.
ಸಂಜೆ 6.30 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎ.ಹಂಸ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಎನ್.ವಿ.ಪ್ರಸಾದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಭಾಗಮಂಡಲ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ಭಾಗವಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.