ADVERTISEMENT

ಸೋಮವಾರಪೇಟೆ: ಮುಳ್ಳೂರು ಶಾಲೆಯಲ್ಲಿ ‘ರಾಕ್ ಡೇ’ ಆಚರಣೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2025, 7:05 IST
Last Updated 27 ಡಿಸೆಂಬರ್ 2025, 7:05 IST
ಸೋಮವಾರಪೇಟೆ ತಾಲ್ಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ವಿದ್ಯಾರ್ಥಿಗಳು ಯುವ ಬ್ರಿಗೇಡ್ ರಾಕ್ ಡೇ ಆಚರಿಸಿದರು
ಸೋಮವಾರಪೇಟೆ ತಾಲ್ಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ವಿದ್ಯಾರ್ಥಿಗಳು ಯುವ ಬ್ರಿಗೇಡ್ ರಾಕ್ ಡೇ ಆಚರಿಸಿದರು   

ಸೋಮವಾರಪೇಟೆ: ಸ್ವಾಮಿ ವಿವೇಕಾನಂದರು ಕನ್ಯಾಕುಮಾರಿ ಬಂಡೆ ಮೇಲೆ ತಪಸ್ಸು ಮಾಡಿ ವಿಶ್ವಗುರು ಭಾರತ ಎಂಬ ಮಹಾಸಂಕಲ್ಪ ರೂಪಿಸಿದ  ಡಿ.25ರ ದಿನವನ್ನು ತಾಲ್ಲೂಕಿನ ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರಾಟೆ ವಿದ್ಯಾರ್ಥಿಗಳು ಯುವ ಬ್ರಿಗೇಡ್ ‘ರಾಕ್ ಡೇ’ ಆಗಿ ಗುರುವಾರ ಆಚರಿಸಿದರು. 

ಕಾರ್ಯಕ್ರಮದ ಪ್ರಯುಕ್ತ ಶಾಲೆಯಲ್ಲಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗದಡಿ ತರಬೇತಿ ಪಡೆಯುತ್ತಿರುವ ಕರಾಟೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ವಾಮಿ ವಿವೇಕಾನಂದರ ಜೀವನ, ಆದರ್ಶಗಳು ಹಾಗೂ ಯುವಶಕ್ತಿ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಸೀಮಾ ಮಾತನಾಡಿ, ವಿವೇಕಾನಂದರು ‘ಯುವಶಕ್ತಿಯೇ ರಾಷ್ಟ್ರಶಕ್ತಿ-ವಿಶ್ವಗುರು ಭಾರತ ನಮ್ಮ ಗುರಿ’ ಎಂಬ ಸಂದೇಶವನ್ನು ಅಂದೇ ನೀಡಿದ್ದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಆತ್ಮಸ್ಥೈರ್ಯ ಮತ್ತು ದೇಶಭಕ್ತಿಯ ಭಾವನೆಗಳನ್ನು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ಕನಸನ್ನು ಸಾಕಾರಗೊಳಿಸುವ ಹೊಣೆ ವಿದ್ಯಾರ್ಥಿಗಳ ಮೇಲಿದೆ’ ಎಂದು ತಿಳಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಸೇವೆಯ ಸಂಕಲ್ಪ ಕೈಗೊಂಡರು.

ಮುಖ್ಯ ಶಿಕ್ಷಕರಾದ ಸಿ.ಎಸ್. ಸತಿಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕರಾದ ಜಾನ್ ಪಾವ್ಲ್ ಡಿಸೋಜ ಹಾಗೂ ಶೀಲಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.