ಸೋಮವಾರಪೇಟೆ: ಇನ್ನರ್ ವೀಲ್ ಕ್ಲಬ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಮುಳ್ಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ವೇಳೆ, ಶಾಲೆಗೆ ₹40 ಸಾವಿರ ವೆಚ್ಚದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಮನೊರಂಜನಾತ್ಮಕ ಕಲಿಕೋಪಕರಣ ನೀಡಲಾಯಿತು.
ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ತನ್ಮಯಿ ಪ್ರವೀಣ್ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ‘ನಮ್ಮ ದೇಶ ಸಮೃದ್ಧ ನಾಡಾಗಬೇಕಾದರೆ ವಿದ್ಯಾರ್ಥಿಗಳು ಜೀವನದ ಮೌಲ್ಯಗಳನ್ನು ಅರಿತು ನಡೆಯಬೇಕಿದೆ. ಗುರು ಹಿರಿಯರ ಆದರ್ಶಗಳನ್ನು ಪಾಲಿಸುತ್ತಾ ಇತರರಿಗೆ ಮಾದರಿಯಾಗಿ ಬಾಳಬೇಕು’ ಎಂದರು.
ಸಂಸ್ಥೆಯ ಕಾರ್ಯದರ್ಶಿ ಸುವೀನ ಕೃಪಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಕತ್ತಲಿನಿಂದ ಬೆಳಕಿನೆಡೆಗೆ ಎಂಬ ಪರಿಕಲ್ಪನೆಯಲ್ಲಿ ಮುಖ್ಯ ಶಿಕ್ಷಕ ಸಿ.ಎಸ್. ಸತೀಶ್ ನಿರ್ಮಿಸಿದ ಗುಹೆ ಮತ್ತು ಅದರೊಳಗೆ ರಚಿಸಲಾಗಿದ್ದ ಸ್ವಾತಂತ್ರ್ಯ ಚಳವಳಿಯ ವಿವಿಧ ಘಟ್ಟಗಳ ಪ್ರದರ್ಶನ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯಹೋರಾಟದ ವಿವಿಧ ಮಜಲುಗಳ ಬಗ್ಗೆ ಅರಿವು ಮೂಡಿಸಿತು.
ಶಾಲೆಯ ಎಸ್ ಡಿಎಂಸಿ ಅಧ್ಯಕ್ಷೆ ಪಂಕಜಾ ಅಧ್ಯಕ್ಷತೆ ವಹಿಸಿದ್ದರು. ಇನ್ನರ್ ವೀಲ್ ಕ್ಲಬ್ ಉಪಾಧ್ಯಕ್ಷೆ ಲತಾ ಮಂಜು, ಸದಸ್ಯರಾದ ಲತಾ ನಾಗೇಶ್, ಶಿಕ್ಷಕ ಜಾನ್ ಪಾವ್ಲ್ ಡಿಸೋಜಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.