ವಿರಾಜಪೇಟೆ: ಕೊಡಗು ಜಿಲ್ಲಾ ಮುಸ್ಲಿಮ್ ಸ್ಪೋರ್ಟ್ಸ್ ಟ್ರಸ್ಟ್ ವತಿಯಿಂದ 20ನೇ ವರ್ಷದ ಕೊಡಗು ಜಿಲ್ಲಾ ಮುಸ್ಲಿಂ ಕ್ರಿಕೆಟ್ ಕಪ್ ಹಾಗೂ ಮೊದಲನೇ ವರ್ಷದ ಹಗ್ಗಜಗ್ಗಾಟ ಮೂರ್ನಾಡಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮೇ 10 ರಂದು ನಡೆಯಲಿದೆ.
ಉದ್ಘಾಟನಾ ಸಮಾರಂಭ ಬೆಳಿಗ್ಗೆ 9.30ಕ್ಕೆ ನಡೆಯಲಿದ್ದು ಮುಸ್ಲಿಂ ಕಪ್ ಸ್ಥಾಪಕ ರಶೀದ್ ಕುಪ್ಪೋಡಂಡ ಅಧ್ಯಕ್ಷತೆ ವಹಿಸುವರು . ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಖಾದರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಹಂಸ ಕೊಟ್ಟಮುಡಿ, ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ಹನೀಫ ಚೋಕಂಡಳ್ಳಿ, ಜಮಾಅತ್ ಅಧ್ಯಕ್ಷ ಅಬ್ದುಲ್ ಮಜೀದ್, ಉಮ್ಮರ್ ಎಡಪಾಲ, ನಿಸಾರ್, ಕಾಳೆರ ಅಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.