
ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ. ಎಚ್.ಎ. ನಗ್ಮಾಭಾನು ಅವರಿಗೆ ಸಾವಯವ ರಸಾಯನಶಾಸ್ತ್ರ ವಿಭಾಗದಲ್ಲಿ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ ಲಭಿಸಿದೆ.
ಹುಬ್ಬಳ್ಳಿಯ ವಿದ್ಯಾನಗರದ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಈಚೆಗೆ ನಡೆದ ಭಾರತೀಯ ರಸಾಯನಶಾಸ್ತ್ರಜ್ಞರ ಮಂಡಳಿಯ 44ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನದಲ್ಲಿ ನಗ್ಮಾಭಾನುಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎರಡನೇ ಬಾರಿ ಈ ಯುವ ಮಹಿಳಾ ಸಂಶೋಧಕಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯ ಅಬ್ಬಾಸ್ ಮತ್ತು ನಸ್ರೀನ್ ದಂಪತಿ ಪುತ್ರಿ ಡಾ. ನಗ್ಮಾಭಾನು ಅವರು ಮಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಬಾಲಕೃಷ್ಣ ಕಲ್ಲೂರಾಯ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪಡೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.