ನಾಪೋಕ್ಲು: ಭಾಗಮಂಡಲ ವ್ಯಾಪ್ತಿಯಲ್ಲಿ ಕಡವೆ ಬೇಟೆ ಪ್ರಕರಣವೊಂದು ಪತ್ತೆಯಾಗಿದ್ದು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಲಾಗಿದೆ.
ಕುಂದಚೇರಿ ಗ್ರಾಮದ ಪೂವಲಮಾನಿ ಎಂಬಲ್ಲಿ ಕಡವೆಯ ಚರ್ಮ, ಕಾಲು ಹಾಗೂ ಗುಂಡು ಪತ್ತೆಯಾಗಿದ್ದು, 4 ದಿನಗಳ ಹಿಂದೆ ಅರಣ್ಯ ಇಲಾಖೆಗೆ ಮಾಹಿತಿ ಲಭಿಸಿದೆ. ಕುಂದಚೇರಿ ಮತ್ತು ಕೋಪಟ್ಟಿ ನಡುವೆ ಅರಣ್ಯ ಪೈಸಾರಿ ಜಾಗದಲ್ಲಿ ಕಡವೆ ಹತ್ಯೆ ನಡೆದಿದ್ದು, ಅರಣ್ಯ ಇಲಾಖೆ ಭಾಗಮಂಡಲ ವಿಭಾಗ ಸಂಶಯಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.