ನಾಪೋಕ್ಲು: ವಿದ್ಯಾರ್ಥಿಗಳು ಉತ್ತಮ ಸಮಾಜದ ಆಸ್ತಿ ಎಂದು ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ವನಜಾ ಹೇಳಿದರು.
ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಆಯೋಜಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಸ್ವ ನಿಗ್ರಹದಿಂದ ಮನಸ್ಸನ್ನು ಹತೋಟಿಗೆ ತಂದುಕೊಳ್ಳುವ ಅನಿವಾರ್ಯತೆ ಇದೆ ಎಂದರು. ಶಾಲೆಯ ಆವರಣ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ ₹1ಲಕ್ಷ ಮೊತ್ತದ ಕೊಡುಗೆ ಶ್ಲಾಘನೀಯ ಎಂದರು.
ಶಿಬಿರಾಧಿಕಾರಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಪಿ.ಪಿ. ಮಾತನಾಡಿ, ಇದುವರೆಗೆ ರಾಜ್ಯದ 19,448 ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿದ್ದು, 21 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದಿದ್ದಾರೆ. ಜನಜಾಗೃತಿ ವೇದಿಕೆಯ ಮೂಲಕ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1906 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1.50 ಲಕ್ಷ ಮಂದಿಯನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದರು.
ಶಿಕ್ಷಕರಾದ ಮೀನಾ, ಜಯಂತಿ, ಒಕ್ಕೂಟದ ಅಧ್ಯಕ್ಷೆ ಪಾರ್ವತಿ, ಒಕ್ಕೂಟದ ಕಾರ್ಯದರ್ಶಿ ಹರಿಣಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.