ನಾಪೋಕ್ಲು: ಹೋಬಳಿ ವ್ಯಾಪ್ತಿಯ ಮರಂದೋಡ, ಕುಂಜಿಲ, ನೆಲಜಿ, ಕಕ್ಕಬ್ಬೆ, ಬಲ್ಲಮಾವಟಿ, ಪುಲಿಕೋಟು ಸೇರಿದಂತೆ ಹಲವೆಡೆ ಶುಕ್ರವಾರ ಮಳೆ ಬಿರುಸಿನಿಂದ ಸುರಿದಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ.
ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದ ಮೇದರ ಸುಬ್ರಮಣಿ ಅವರ ವಾಸದ ಮನೆಯ ಒಂದು ಭಾಗದ ಗೋಡೆ ಶುಕ್ರವಾರ ಬೆಳಿಗ್ಗೆ ಭಾರಿ ಮಳೆಯಿಂದಾಗಿ ಕುಸಿದು ನಷ್ಟ ಸಂಭವಿಸಿದೆ. ಈ ಸಂದರ್ಭ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಸಮೀಪದ ಯವಕಪಾಡಿ ಗ್ರಾಮದ ನಿವಾಸಿ ಪಾಲೆ ಪಮ್ಮು ಅವರ ಮಣ್ಣಿನ ವಾಸದ ಶುಕ್ರವಾರ ಕುಸಿದಿದೆ. ಮನೆಯ ಮರ ಮುಟ್ಟುಗಳು, ಹೆಂಚು ಹಾಗೂ ಮನೆಯಲ್ಲಿದ್ದ ಸಾಮಗ್ರಿಗಳು ನಷ್ಟವಾಗಿದೆ. ಎರಡೂ ಸ್ಥಳಕ್ಕೆ ಕಂದಾಯ ಪರಿವೀಕ್ಷಕ ರವಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.