ನಾಪೋಕ್ಲು:‘ಯುವಜನರು ಸುರಕ್ಷಿತ ಜೀವನ ಶೈಲಿಯಿಂದ ದೊರೆಯುವ ಪ್ರಯೋಜನಗಳ ಬಗ್ಗೆ ಅರಿವು ಹೊಂದಿರಬೇಕು’ ಎಂದು ಮಡಿಕೇರಿ ಸರ್ಕಾರಿ ಆಸ್ಪತ್ರೆಯ ಆಪ್ತ ಸಮಾಲೋಚಕಿ ಅನಿತಾ ಹೇಳಿದರು.
ಸಮೀಪದ ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್ ಆಯೋಜಿಸಿದ್ದ ಹೆಚ್ಐವಿ ಏಡ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
‘ಯುವಜನರಲ್ಲಿ ಏಡ್ಸ್ ರೋಗದ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ಹೆಚ್ಐವಿ ಸೋಂಕಿತ ವ್ಯಕ್ತಿಗಳ ವಿರುದ್ಧ ಸಮಾಜದಲ್ಲಿ ಮಾನಸಿಕ ಅಸಹನೆ ಇರುತ್ತದೆ. ಹೆಚ್ಐವಿ ವೈರಸ್ ಪೀಡಿತ ವ್ಯಕ್ತಿಗಳ ಬಗ್ಗೆ ಸಹಾನುಭೂತಿ ಹೊಂದಿದ ಸಮಾಜವನ್ನು ನಿರ್ಮಿಸುವುದು ಅಗತ್ಯವಾಗಿದೆ’ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಕೆ.ಎಸ್ ವಿಲ್ಮಾ, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.