ನಾಪೋಕ್ಲು: ಚೆರಿಯಪರಂಬುವಿನಿಂದ ಬಾಳೆಯಡ ಕುಟುಂಬಸ್ಥರ ಮನೆಗೆ ತೆರಳುವ ಕಾಂಕ್ರೀಟ್ ರಸ್ತೆಯನ್ನು ಗುರುವಾರ ಉದ್ಘಾಟಿಸಲಾಯಿತು.
ನೂತನ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಶಾಸಕರ ನಿಧಿಯಿಂದ ₹15 ಲಕ್ಷ ಅನುದಾನದಲ್ಲಿ ಬಾಳೆಯಡ ಕುಟುಂಬಸ್ಥರ ಮನೆಗೆ ತೆರಳಲು ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗಿದೆ. ಇದರಿಂದ ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಮಾಚೆಟ್ಟಿರ ಕುಸು ಕುಶಾಲಪ್ಪ, ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.