
ನಾಪೋಕ್ಲು: ಮಾಜಿ ಸೈನಿಕರ ಸಂಘದ ವತಿಯಿಂದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ಸಂಘದ ಅಧ್ಯಕ್ಷ ಕೊಂಡಿರ ನಾಣಯ್ಯ ಹೇಳಿದರು.
ಇಲ್ಲಿನ ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಮಾಜಿ ಸೈನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಂಘವು ಸತತವಾಗಿ ಪ್ರಯತ್ನಿಸುತ್ತಿದ್ದು, ನಾಪೋಕ್ಲು ವ್ಯಾಪ್ತಿಯ ಮಾಜಿ ಸೈನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಲು ಜಿಲ್ಲಾ ಸಂಘದೊಂದಿಗೆ ನಿರಂತರ ಸಂಪರ್ಕದಲ್ಲಿದೆ’ ಎಂದರು.
‘ಮಾಜಿ ಸೈನಿಕರು ತಮ್ಮ ದಾಖಲೆಗಳನ್ನು ಸರಿಪಡಿಸಲು ಸಂಘದ ಸಂಪರ್ಕದಲ್ಲಿ ಇದ್ದು, ವಾರ್ಷಿಕ ಸಭೆಗೆ ದೂರವೇ ಉಳಿಯುತ್ತಿರುವುದು ವಿಷಾದನೀಯ’ ಎಂದು ಬೇಸರ ವ್ಯಕ್ತಪಡಿಸಿದರು.
ಸಂಘದ ಬೆಳವಣಿಗೆಗೆ ಕೈಗೊಳ್ಳಬೇಕಾದ ವಿಷಯಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಸಂಘದ ಕಾರ್ಯದರ್ಶಿ ಕೇಟೋಳಿರ ಅಪ್ಪಚ್ಚ ವಾರ್ಷಿಕ ವರದಿ ಮಂಡಿಸಿದರು. ಸಭೆಯಲ್ಲಿ ಹಿರಿಯರಾದ ನಾಯಕಂಡ ಬೊಪಣ್ಣ, ಸಂಘದ ಉಪಾಧ್ಯಕ್ಷ ಅಪ್ಪುಮಣಿಯಂಡ ನಾಣಯ್ಯ, ಖಜಾಂಜಿ ಅಬ್ದುಲ್ ಕರೀಂ ಎಂ. ಎಲ್., ನಿರ್ದೇಶಕರಾದ ಬಾಳೆಯಡ ಸೋಮಯ್ಯ, ಪುಲ್ಲೆರ ಪಳಗಪ್ಪ, ಕಂಬೆಯಂಡ ಅಪ್ಪಣ್ಣ, ಅಮ್ಮಂಡ ಅಶೋಕ್, ಪಾಡಿಯಮ್ಮಡ ಅಪ್ಪನಮಯ್ಯ, ಮುಂಡೋಟಿರ ಪಾರ್ವತಿ ಹಾಗೂ ಸಂಘದ ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.