
ಪ್ರಜಾವಾಣಿ ವಾರ್ತೆ
ಕರಾಟೆ ಮತ್ತು ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಗೆ ಭಾಜನರಾದ ನಾಪೋಕ್ಲುವಿನ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರು.
ನಾಪೋಕ್ಲು: ಇಲ್ಲಿನ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕರಾಟೆ ಮತ್ತು ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕುಶಾಲನಗರದಲ್ಲಿ ನಡೆದ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಇಲ್ಲಿನ 63 ವಿದ್ಯಾರ್ಥಿನಿಯರು ಭಾಗವಹಿಸಿದ್ದು 18 ವಿದ್ಯಾರ್ಥಿನಿಯರು ಚಿನ್ನದ ಪದಕ, 22 ಮಂದಿ ಬೆಳ್ಳಿ ಪದಕ ಮತ್ತು 23 ಮಂದಿ ಕಂಚಿನ ಪದಕವನ್ನು ಗೆದ್ದಿದ್ದಾರೆ ಎಂದು ಕರಾಟೆ ಮಾಸ್ಟರ್ ಯೋಗೇಶ್, ಪ್ರಾಂಶುಪಾಲರಾದ ನೀತಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.