ಪ್ರಾತಿನಿಧಿಕ ಚಿತ್ರ
ನಾಪೋಕ್ಲು: ಕಾರ್ಮಿಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ನಡೆದಿದೆ.
ಕೊಡಗಿನ ಮಾಲ್ದಾರೆ ನಿವಾಸಿ ರಮೇಶ್ (28) ಆತ್ಮಹತ್ಯೆ ಮಾಡಿಕೊಂಡವರು.
ರಮೇಶ್ ಗ್ರಾಮದ ಅಪ್ಪಚೆಟ್ಟೋಳಂಡ ವಾಸು ಎಂಬುವರ ಕಾಫಿ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಊರಿಗೆ ತೆರಳಲು ಬಸ್ ಸೌಕರ್ಯ ಇಲ್ಲದ್ದರಿಂದ ಗ್ರಾಮದ ನೇತಾಜಿ ವಿದ್ಯಾ ಸಂಸ್ಥೆಯ ಕಾವಲುಗಾರ ಕುಮಾರ ಎಂಬುವರಲ್ಲಿ ಉಳಿದುಕೊಳ್ಳಲು ಆಶ್ರಯ ಕೇಳಿದ್ದರು. ಭಾನುವಾರ ರಾತ್ರಿ ಕಾವಲುಗಾರ ವಾಸವಿದ್ದ ತಾಣದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರ ಅಣ್ಣ ಲೋಕೇಶ್ ಅವರು ದೂರು ನೀಡಿದ್ದು, ಇಲ್ಲಿಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.