ನಾಪೋಕ್ಲು: ‘ಧರ್ಮ ಎನ್ನುವುದು ಹೊರಗಿಲ್ಲ. ಅದು ಇರುವುದು ಅಂತರಂಗದಲ್ಲಿ ಮತ್ತು ನಿತ್ಯದ ನಡವಳಿಕೆಯಲ್ಲಿ. ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡುತ್ತ ಗಳಿಕೆಯ ಜೊತೆಗೆ ಉಳಿಕೆಯ ಬಗ್ಗೆ ಕೂಡ ಪ್ರತಿ ಕ್ಷಣ ಜನತೆ ಎಚ್ಚರದಲ್ಲಿರಬೇಕು. ಅದೇ ಲಕ್ಷ್ಮಿಗೆ ನಾವು ಸಲ್ಲಿಸುವ ದೊಡ್ಡ ಗೌರವ’ ಎಂದು ಮಡಿಕೇರಿ ಆಕಾಶವಾಣಿ ಕೇಂದ್ರದ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಹೇಳಿದರು.
ಸಂಪಾಜೆ - ದೇವರಕೊಲ್ಲಿ ಚಾಮುಂಡೇಶ್ವರೀ ದೇವಸ್ಥಾನ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮಟ್ಟದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು.
ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲ್ಲೂಕಿನ ಯೋಜನಾಧಿಕಾರಿ ಪುರುಷೋತ್ತಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಧನಂಜಯ ಆಗೋಳಿಕಜೆ ಕ್ಷೇತ್ರದ ಸಂರಕ್ಷಣೆ, ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷ ರಾಜೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸೂಳ್ಯದ ಚುಟುಕು ಸಾಹಿತ್ಯ ಪರಿಷತ್ ಕಾರ್ಯದರ್ಶಿ ಉದಯ ಭಾಸ್ಕರ್, ದೇವರ ಕೊಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಅಧ್ಯಕ್ಷ ಯಶೋಧರ ಸಂಪಾಜೆ, ಪಂಚಾಯಿತಿ ಅಧ್ಯಕ್ಷೆ ವಿಮಲಾಕ್ಷಿ, ಶೌರ್ಯ ವಿಪತ್ತು ತಂಡದ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳು, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಯವರು ಸರ್ವ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.