ಸಿದ್ದಾಪುರ: ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ (ಎಸ್‌ಎನ್‌ಡಿಪಿ) ಹೆಗ್ಗಳ ಶಾಖೆಯ ವತಿಯಿಂದ ನಾರಾಯಣ ಗುರುಗಳ ಜಯಂತಿಯ ಆಚರಣೆ ಭಾನುವಾರ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಅಧ್ಯಕ್ಷ ವಿ.ಕೆ ಲೊಕೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಂಘಟನೆಯಿಂದ ಶಕ್ತರಾಗಲು ಹಾಗೂ ವಿದ್ಯೆಯಿಂದ ಸ್ವತಂತ್ರರಾಗುವಂತೆ ಗುರುಗಳು ಕರೆ ನೀಡಿದ್ದರು. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು. ಗುರುಗಳ ತತ್ವ ಸಿದ್ಧಾಂತವನ್ನು ಜೀವನದಲ್ಲಿ ಅಳವಡಿಸುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಎಸ್‌ಎನ್‌ಡಿಪಿ ಶಾಖೆಗಳಿದ್ದು, ಸಂಘಟನೆಯು ಜಿಲ್ಲಾದ್ಯಂತ ಉತ್ತಮ ಕೆಲಸಗಳನ್ನು ಮಾಡುತ್ತಿದೆ ಎಂದರು.
ಜಿ.ಪಂ ಮಾಜಿ ಸದಸ್ಯರಾದ ಮಹೇಶ್ ಗಣಪತಿ ಮಾತನಾಡಿ, ಕೇರಳದ ಜಾತಿ ವ್ಯವಸ್ಥೆಯ ವಿರುದ್ಧ ನಿಂತು, ಕೆರಳದ ಜನರಿಗೆ ದೇವಾಲಯ ನಿರ್ಮಿಸಿ, ಪೂಜೆಗೆ ಅನುವು ಮಾಡಿಕೊಟ್ಟಿದ್ದರು. ಗುರುಗಳ ಆದರ್ಶ ಅನುಕರಣೀಯ ಎಂದರು.
ಅಧ್ಯಕ್ಷತೆಯನ್ನು ಎಸ್‌ಎನ್‌ಡಿಪಿ ಹೆಗ್ಗಳ ಶಾಖೆಯ ಅಧ್ಯಕ್ಷರಾದ ರಮೇಶ್ ವಹಿಸಿದ್ದರು. ಈ ಸಂದರ್ಭ ಎಸ್‌ಎನ್‌ಡಿಪಿ ಯೂನಿಯನ್ ಕೌನ್ಸಿಲರ್ ಪಾಪಾಯ್ಯ ಸೇರಿದಂತೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಹಿಳೆಯರಿಗೆ, ಪುರುಷರಿಗೆ ಹಗ್ಗಜಗ್ಗಾಟ, ವಿವಿಧ ಕ್ರೀಡಾ ಸ್ಪರ್ಧೆ ನಡೆಯಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.