ADVERTISEMENT

ಮಡಿಕೇರಿಯಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2022, 10:58 IST
Last Updated 11 ಸೆಪ್ಟೆಂಬರ್ 2022, 10:58 IST
   

ಮಡಿಕೇರಿ: ಇಲ್ಲಿನ ಅರಣ್ಯ ಭವನದಲ್ಲಿ ಅರಣ್ಯ ಇಲಾಖೆ ವತಿಯಿಂದ ಭಾನುವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ನಡೆಯಿತು.

ಕಳೆದ 56 ವರ್ಷಗಳಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದ 54 ಮಂದಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನೆನೆಯಲಾಯಿತು.

ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನಿರಂಜನ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಪುಷ್ಪಗುಚ್ಛವಿರಿಸಿ ಗೌರವ ಸಮರ್ಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.