ADVERTISEMENT

ಮಾನವನ ಸ್ವಯಂಕೃತ ಅಪರಾಧದಿಂದ ಪ್ರಾಕೃತಿಕ ದುರಂತ: ಜಗನ್ನಾಥ್

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2024, 14:11 IST
Last Updated 11 ಆಗಸ್ಟ್ 2024, 14:11 IST
ವಿರಾಜಪೇಟೆ ವಲಯ ಉಪ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿದರು.
ವಿರಾಜಪೇಟೆ ವಲಯ ಉಪ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿದರು.   

ಸಿದ್ದಾಪುರ: ಮಾನವನ ಸ್ವಯಂಕೃತ ಅಪರಾಧಗಳಿಂದ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿದ್ದು, ಪ್ರಕೃತಿ ರಕ್ಷಣೆ ಅತ್ಯಗತ್ಯ ಎಂದು ವಿರಾಜಪೇಟೆ ಅರಣ್ಯ ಉಪ ಸಂರಕ್ಷಣಾಧಿಕಾರಿ ಜಗನ್ನಾಥ್ ಅಭಿಪ್ರಾಯಪಟ್ಟರು.

ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ವಿರಾಜಪೇಟೆ ವಲಯ ಅರಣ್ಯ ಇಲಾಖೆ ಮತ್ತು ಬಿ.ಜಿ.ಎಸ್. ಪಬ್ಲಿಕ್ ಶಾಲೆ ಸಿದ್ದಾಪುರ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು, ಬಳಿಕ ಮಾತನಾಡಿದರು. ವನ ಸಂಪತ್ತನ್ನು ಉಳಿಸಿ ಬೆಳೆಸುವ ಮಹತ್ತರ ಜವಾಬ್ದಾರಿ ನಾಗರೀಕ ಸಮಾಜದ ಮೇಲೆ ಇದೆ. ಯುವ ಜನತೆ
ಗಿಡ ಮರಗಳನ್ನು ಬೆಳೆಸಿ ಪೋಷಿಸಬೇಕು.ಪರಿಸರವನ್ನು ನಾವು ಸಂರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪ್ರತಿಯೊಬ್ಬರೂ ಮನೆಯ ಅಂಗಳದಲ್ಲಿ ಸಸಿ ನೆಟ್ಟು ಸಂರಕ್ಷಿಸಬೇಕು. ಈ ದಿಸೆಯಲ್ಲಿ ಗಿಡಮರ ಉಳಿಸಿ ಪರಿಸರ ಸಂರಕ್ಷಣೆ ಮಾಡಬೇಕು. ರೈತರು ತಮ್ಮ ತೋಟದಲ್ಲಿ ನೆಟ್ಟು ಪೋಷಿಸುವ ಗಿಡಗಳಿಗೆ ಇಲಾಖೆಯಿಂದ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು


ವಿರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಜಿತ್ ಕುಮಾರ್ ಗುಹ್ಯ ಮಾತನಾಡಿ, ನಶಿಸಿ ಹೋಗುತ್ತಿರುವ ನಮ್ಮ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಬ್ದಾರಿಯಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ನೆನಪಿಗಾಗಿ ಗಿಡವನ್ನು ನೆಟ್ಟು ಬೆಳೆಸಬೇಕು.ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಿ, ವಿದ್ಯಾರ್ಥಿ ಜೀವನದಿಂದಲೇ ಪರಿಸರ ಪ್ರೇಮವನ್ನು ಮೈಗೂಡಿಸಿಕೊಳ್ಳಬೇಕೆಂದು ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ವಲಯ ಅರಣ್ಯ ಅಧಿಕಾರಿ ಶಿವರಾಮ್, ಡಿಆರ್‌ಎಫ್‌ಒ ದೇಯಂಡ ಸಂಜಿತ್ ಸೋಮಯ್ಯ, ಅರುಣ್, ಬಿ.ಜಿ.ಎಸ್. ಪಬ್ಲಿಕ್ ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ್, ಕಾಲೇಜು ಪ್ರಾಂಶುಪಾಲರಾದ ಕಳೇಗೌಡ, ಸಂಘದ ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ, ಸದಸ್ಯರಾದ ವಾಸು, ಸುಬ್ರಮಣಿ, ಎಂ.ಎ ಕೃಷ್ಣ, ಆಂಟೋಣಿ, ಕೊಡಗು ಪ್ರೆಸ್ ಕ್ಲಬ್ ಉಪಾಧ್ಯಕ್ಷ ತೇಜಸ್ ಪಾಪಯ್ಯ, ಪರಿಸರ ಪ್ರೇಮಿ ರಾಜೇಂದ್ರ ಸಿಂಗ್, ಶಾಲಾ ಶಿಕ್ಷಕರು ಅರಣ್ಯ ಇಲಾಖೆ ಆರ್.ಆರ್.ಟಿ ಸಿಬ್ಬಂದಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.