ADVERTISEMENT

ಮಡಿಕೇರಿ: ಪಯಸ್ವಿನಿ ನದಿಯಲ್ಲಿ NDRF ಪಡೆಯಿಂದ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2022, 11:12 IST
Last Updated 2 ಆಗಸ್ಟ್ 2022, 11:12 IST
   

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉಕ್ಕಿ ಹರಿಯುತ್ತಿರುವ ಪಯಸ್ವಿನಿ ನದಿಯ ಕಿಂಡಿ ಸೇತುವೆಗೆ ಸಿಲುಕಿರುವ ಮರದ ದಿಮ್ಮಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ನಿಯೋಜಿಸಲಾಗಿದೆ.

ಗುಡ್ಡದಿಂದ ಹರಿದು ಬರುತ್ತಿರುವ ಹೊಳೆಗೆ ಮರದ ದಿಮ್ಮಿಗಳು ಕೊಚ್ಚಿಕೊಂಡು ಬಂದು ಸೇತುವೆಗೆ ಸಿಲುಕಿ ನೀರು ಹೊಳೆತೀರದ ಮನೆಗಳಿಗೆ ನುಗ್ಗಿದೆ. ಎಲ್ಲರನ್ನೂ ಕಾಳಜಿ ಕೇಂದ್ರಗಳಿಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಬಿ‌.ಸಿ.ಸತೀಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.