ADVERTISEMENT

ಕ್ಷಯರೋಗ ಪತ್ತೆ ಆಂದೋಲನ

​ಪ್ರಜಾವಾಣಿ ವಾರ್ತೆ
Published 1 ಜನವರಿ 2019, 13:40 IST
Last Updated 1 ಜನವರಿ 2019, 13:40 IST
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಷಯರೋಗ ಆಂದೋಲನದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅನಾವರಣಗೊಳಿಸಿದರು
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಷಯರೋಗ ಆಂದೋಲನದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅನಾವರಣಗೊಳಿಸಿದರು   

ಮಡಿಕೇರಿ: ಭಾರತವನ್ನು 2025ರ ವೇಳೆಗೆ ಕ್ಷಯರೋಗಮುಕ್ತ ದೇಶವನ್ನಾಗಿ ಮಾಡುವ ಉದ್ದೇಶದಿಂದ 2ನೇ ಸುತ್ತಿನ ಸಕ್ರಿಯ ಕ್ಷಯರೋಗ ನಿಯಂತ್ರಣ ಆಂದೋಲನ ಜ.2ರಿಂದ 12ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕ್ಷಯರೋಗ ಪತ್ತೆ ಕಾರ್ಯದಲ್ಲಿ ಕಾಫಿ ತೋಟಗಳ ಲೈನ್‌ಮನೆಗಳಲ್ಲಿ ವಾಸವಿರುವ ಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಮಾತನಾಡಿ, ‘ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಹಿರಿಯ ಮಹಿಳಾ ಮತ್ತು ಪುರುಷ ಆರೋಗ್ಯ ಸಹಾಯಕರಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ₹62 ಸಾವಿರ ಮನೆಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಶಿವಕುಮಾರ್, ಔಷಧ ನಿಯಂತ್ರಕ ಬಾಬು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.