ADVERTISEMENT

‘ದವಸ ಭಂಡಾರ: ಪುನಶ್ಚೇತನಕ್ಕೆ ಸಹಕಾರ ನೀಡಿ’   

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 14:12 IST
Last Updated 18 ಜನವರಿ 2019, 14:12 IST
ಮಡಿಕೇರಿಯ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶುಕ್ರವಾರ ಸಹಕಾರ ದವಸ ಸಂಘಗಳ ಅಭಿವೃದ್ಧಿ ಶಿಕ್ಷಣ ಕಾರ್ಯಾಗಾರದಲ್ಲಿ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಎ.ಕೆ.ಮನು ಮುತ್ತಪ್ಪ ಮಾತನಾಡಿದರು
ಮಡಿಕೇರಿಯ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶುಕ್ರವಾರ ಸಹಕಾರ ದವಸ ಸಂಘಗಳ ಅಭಿವೃದ್ಧಿ ಶಿಕ್ಷಣ ಕಾರ್ಯಾಗಾರದಲ್ಲಿ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಎ.ಕೆ.ಮನು ಮುತ್ತಪ್ಪ ಮಾತನಾಡಿದರು   

ಮಡಿಕೇರಿ: ‘ಜಿಲ್ಲೆಯಲ್ಲಿ ಪೂರ್ವಿಕರು ಉಳಿಸಿಕೊಂಡು ಬಂದಿರುವ ದವಸ ಭಂಡಾರಗಳ ಸಹಕಾರ ಸಂಘಗಳನ್ನು ಮುಂದಿನ ಪೀಳಿಗೆಗೂ ಉಳಿಸುವುದಕ್ಕಾಗಿ ಎಲ್ಲರೂ ಕೈಜೋಡಿಸಬೇಕು’ ಎಂದು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಎ.ಕೆ.ಮನು ಮುತ್ತಪ್ಪ ಮನವಿ ಮಾಡಿದರು.

ನಗರದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶುಕ್ರವಾರ ಸಹಕಾರ ದವಸ ಭಂಡಾರಗಳ ಸಂಘಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 87 ದವಸ ಭಂಡಾರಗಳಿವೆ. ಇಡೀ ದೇಶದಲ್ಲಿಯೇ ಮಾದರಿ ಭಂಡಾರಗಳನ್ನು ಜಿಲ್ಲೆಯಲ್ಲಿ ಕಾಣಬಹುದು. ಇವುಗಳನ್ನು ಪುನಶ್ಚೇತನಗೊಳಿಸುವಲ್ಲಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.

ADVERTISEMENT

ವಿರಾಜಪೇಟೆ ತಾಲ್ಲೂಕು ಶ್ರೇಷ್ಠ ಸಹಕಾರಿ ಪ್ರಶಸ್ತಿ ಪುರಸ್ಕೃತ ಕೆ.ಎಂ.ಸೋಮಯ್ಯ ಮಾತನಾಡಿ, ದವಸ ಭಂಡಾರಗಳಿಗೆ ಹಿಂದೆ ಬಹಳ ಮಹತ್ವವಿತ್ತು. ಬ್ಯಾಂಕ್‌ಗಳು ಇಲ್ಲದ ಕಾಲದಲ್ಲಿ ಇವುಗಳ ಪಾತ್ರ ಮಹತ್ವದ್ದಾಗಿತ್ತು ಎಂದು ತಿಳಿಸಿದರು.

ನಬಾರ್ಡ್‌ನ ಸಹಾಯಕ ಮಹಾ ಪ್ರಬಂಧಕ ಮುಂಡಂಡ ಸಿ. ನಾಣಯ್ಯ ಮಾತನಾಡಿ, ‘ರೈತರು ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಂಬಲ ಬೆಲೆ ದೊರೆಯುವಂತಾಗಬೇಕು. ರೈತ ಉತ್ಪಾದಕರ ಸಂಸ್ಥೆಗಳ ಮೂಲಕ ಆರ್ಥಿಕ ಚಟುವಟಿಕೆ ಕೈಗೊಳ್ಳಬೇಕು’ ಎಂದು ಹೇಳಿದರು.

ಸಹಕಾರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲ ಗುರುಮಲ್ಲಪ್ಪ, ಸಹಕಾರಿ ಯೂನಿಯನ್‌ ವ್ಯವಸ್ಥಾಪಕಿ ಮಂಜುಳಾ, ಸಿಇಒ ಯೋಗೇಂದ್ರ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.