ADVERTISEMENT

ಸ್ಟೋನ್‌ ಹಿಲ್‌ನಲ್ಲಿ ಆಕಸ್ಮಿಕ ಬೆಂಕಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 13:33 IST
Last Updated 20 ಮಾರ್ಚ್ 2019, 13:33 IST
ಮಡಿಕೇರಿಯ ಸ್ಟೋನ್‌ ಹಿಲ್‌ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ
ಮಡಿಕೇರಿಯ ಸ್ಟೋನ್‌ ಹಿಲ್‌ನಲ್ಲಿ ಕಾಣಿಸಿಕೊಂಡಿದ್ದ ಬೆಂಕಿ   

ಮಡಿಕೇರಿ: ನಗರದ ಸ್ಟೋನ್‌ ಹಿಲ್ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಕುರುಚಲು ಕಾಡು ಬೆಂಕಿಗೆ ಆಹುತಿಯಾಗಿದೆ. ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಬೆಟ್ಟದಲ್ಲಿನ ಹುಲ್ಲುಗಾವಲು ಸುಟ್ಟು ಬೂದಿಯಾಗಿದೆ.

ಬೆಟ್ಟದ ಕೆಳಭಾಗದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ನಗರದ ಜನರೂ ಆತಂಕಗೊಂಡಿದ್ದರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ಹತೋಟಿಗೆ ತರಲು ಯಶಸ್ವಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT