ADVERTISEMENT

ವೀರೇಂದ್ರ ಹೆಗಡೆ ಜ.10ಕ್ಕೆ ಜಿಲ್ಲೆಗೆ ಭೇಟಿ: ಸಂತ್ರಸ್ತರಿಗೆ ನೆರವು ವಿತರಣೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2019, 12:50 IST
Last Updated 8 ಜನವರಿ 2019, 12:50 IST

ಮಡಿಕೇರಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಜ.10ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ಪ್ರಕೃತಿ ವಿಕೋಪದಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವರು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕರಾವಳಿ ಪ್ರಾದೇಶಿಕ ಕಚೇರಿ ನಿರ್ದೇಶಕ ಮಹಾವೀರ ಅಜ್ರಿ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ‘ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಸಾಕಷ್ಟು ಹಾನಿಯಾಗಿದೆ. ವೀರೇಂದ್ರ ಹೆಗಡೆ ಅವರು ₹ 10 ಕೋಟಿ ನೆರವು ₹ 2 ಕೋಟಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದು, ಉಳಿದ ನೆರವನ್ನು ಸಂತ್ರಸ್ತ ಕುಟುಂಬಗಳಿಗೆ ನೇರವಾಗಿ ವಿತರಿಸಲಾಗುವುದು‘ ಎಂದರು.

ಪರಿಶೀಲನಾ ತಂಡದೊಂದಿಗೆ ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರ ವರೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಹಾಗೂ ಮಧ್ಯಾಹ್ನ 3ಕ್ಕೆ ನಗರದ ಗಾಂಧಿ ಮೈದಾನದಲ್ಲಿ ಸಮಾಲೋಚನಾ ಸಭೆ ಹಾಗೂ ಪರಿಹಾರ ಧನ ವಿತರಣೆ ಕಾರ್ಯಕ್ರಮದಲ್ಲಿ ವೀರೇಂದ್ರ ಹೆಗಡೆ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ADVERTISEMENT

ಸಂತ್ರಸ್ತ ಪ್ರತಿ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತುಗಳ ಖರೀದಿಗೆ ₹ 15 ಸಾವಿರ, ಮನೆ ನಿರ್ಮಾಣ ಹಾಗೂ ಮನೆ ದುರಸ್ತಿಗೆ ₹ 25 ಸಾವಿರ, ಕೃಷಿಭೂಮಿ ಪುನರ್‌ ನಿರ್ಮಾಣಕ್ಕೆ ₹ 25 ಸಾವಿರ ಪರಿಹಾರ ಧನವನ್ನು ವಿತರಿಸಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಯೋಗೀಶ್, ಮಡಿಕೇರಿ ಮೇಲ್ವಿಚಾರಕ ಮುಕುಂದ್, ಪ್ರಕಾಶ್, ಹರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.