ADVERTISEMENT

ಲೋಕಸಭಾ ಚುನಾವಣೆ ಮತ ಎಣಿಕೆ: 23ರಂದು ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 18 ಮೇ 2019, 13:01 IST
Last Updated 18 ಮೇ 2019, 13:01 IST

ಮಡಿಕೇರಿ: ಲೋಕಸಭಾ ಚುನಾವಣೆ ಮತ ಎಣಿಕೆಯು ಮೇ 23ರಂದು ನಡೆಯಲಿದ್ದು ಕೊಡಗು ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

23ರಂದು ಬೆಳಿಗ್ಗೆ 6ರಿಂದ ಅದೇ ದಿನ ಮಧ್ಯರಾತ್ರಿ 12ರ ತನಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಇರಲಿದೆ.

ಆ ಸಮಯದಲ್ಲಿ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದುಕೊಂಡು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶ ಹೊರಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.