ADVERTISEMENT

12ರಂದು ಸವಿತಾ ಮಹರ್ಷಿ ಜಯಂತಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 14:02 IST
Last Updated 5 ಫೆಬ್ರುವರಿ 2019, 14:02 IST

ಮಡಿಕೇರಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸವಿತಾ ಸಮಾಜದ ವತಿಯಿಂದ ಫೆ. 12ರಂದು ಸವಿತಾ ಮಹರ್ಷಿ ಜಯಂತಿ ಆಚರಣೆಯು ನಗರದ ಕೋಟೆ ಆವರಣದಲ್ಲಿ ನಡೆಯಲಿದೆ ಎಂದು ಸವಿತಾ ಸಮಾಜದ ಕಾರ್ಯದರ್ಶಿ ಕೆ.ಎನ್.ಅವಿನಾಶ್ ತಿಳಿಸಿದರು.

ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಬೆಳಿಗ್ಗೆ 9.30ಕ್ಕೆ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಅಲ್ಲಿಂದ ಸವಿತಾ ಮಹರ್ಷಿ ಭಾವಚಿತ್ರದೊಂದಿಗೆ ಮೆರವಣಿಗೆ ಆರಂಭಗೊಂಡು ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸಲಿದೆ’ ಎಂದು ಮಾಹಿತಿ ನೀಡಿದರು.

ಬೆಳಿಗ್ಗೆ 11ಕ್ಕೆ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್‌, ಕೆ.ಜಿ. ಬೋಪಯ್ಯ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಸ್.ಲೊಕೇಶ್ ಸಾಗರ್, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT

ಸವಿತಾ ಸಮಾಜದ ಅಧ್ಯಕ್ಷ ಎಚ್.ಎಂ.ವೆಂಕಟೇಶ್, ಪ್ರಮುಖರಾದ ಪುಟ್ಟರಾಜು, ಎಂ.ಡಿ.ಮಧು, ಕೆ.ಟಿ.ವೆಂಕಟೇಶ್, ಪುಷ್ಪಾ ಜಯರಾಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.