ADVERTISEMENT

ಕಾಮಗಾರಿ ಗುತ್ತಿಗೆ: ಜಿಲ್ಲಾಡಳಿತದ ವಿರುದ್ಧ ಹೋರಾಟದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2019, 12:00 IST
Last Updated 2 ಫೆಬ್ರುವರಿ 2019, 12:00 IST

ಮಡಿಕೇರಿ: ‘ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ಕೊಡಗಿನ ಗುತ್ತಿಗೆದಾರರಿಗೇ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಸಂಘಟನಾ ಕಾರ್ಯದರ್ಶಿ ರವಿಚಂಗಪ್ಪ ಎಚ್ಚರಿಸಿದರು.

‘ಕೊಡಗಿನ ಗುತ್ತಿಗೆದಾರರನ್ನು ಕಡೆಗಣಿಸಿ ಹೊರ ಜಿಲ್ಲೆಯವರಿಗೆ ರಸ್ತೆ ಕಾಮಗಾರಿಯ ಗುತ್ತಿಗೆ ನೀಡಲಾಗಿದೆ. ಇದು ಖಂಡನೀಯ ನಡೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಸದಸ್ಯ ಎ.ಕೆ.ಗಣೇಶ್ ಮಾತನಾಡಿ, ‘ನಮ್ಮ ನೋವು ಸಚಿವರಿಗೆ ಅರ್ಥವಾಗುತ್ತಿಲ್ಲ. ಈ ಕಾರಣದಿಂದಲೇ ಸ್ಥಳೀಯ ಗುತ್ತಿಗೆದಾರರನ್ನು ನಿರ್ಲಕ್ಷಿಸಿ, ಹೊರಗಿನ ಗುತ್ತಿಗೆದಾರರಿಗೆ ಅವಕಾಶ ನೀಡಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಹೊಸಬೀಡು ಶಶಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.