ADVERTISEMENT

ಶುಲ್ಕ ಹೆಚ್ಚಳ ಪ್ರಸ್ತಾಪಕ್ಕೆ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 14:23 IST
Last Updated 10 ಜನವರಿ 2019, 14:23 IST
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ ವತಿಯಿಂದ ಶುಲ್ಕ ಹೆಚ್ಚಳದ ಪ್ರಸ್ತಾಪ ವಿರೋಧಿಸಿ ಪ್ರತಿಭಟನೆ ನಡೆಯಿತು 
ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ ವತಿಯಿಂದ ಶುಲ್ಕ ಹೆಚ್ಚಳದ ಪ್ರಸ್ತಾಪ ವಿರೋಧಿಸಿ ಪ್ರತಿಭಟನೆ ನಡೆಯಿತು    

ಮಡಿಕೇರಿ: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಅನಿವಾಸಿ ಭಾರತೀಯರ ಕೋಟಾ ಹಾಗೂ ಶುಲ್ಕ ಹೆಚ್ಚಳದ ಪ್ರಸ್ತಾಪ ವಿರೋಧಿಸಿ ನಗರದಲ್ಲಿಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್‌ ಆರ್ಗನೈಸೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳು ‍ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಒ ರಾಜ್ಯ ಸಮಿತಿ ಸದಸ್ಯ ಅಜಯ್‌ಕಾಮತ್ ಮಾತನಾಡಿ, ಸರ್ಕಾರದ ನಿಲುವು ನಿಜಕ್ಕೂ ವೈದ್ಯರು, ವೈದ್ಯಕೀಯ ಶಿಕ್ಷಣದ ವಿದ್ಯಾರ್ಥಿ ಹಾಗೂ ಪೋಷಕರಲ್ಲಿ ಆತಂಕ ಮೂಡಿಸಿದೆ ಎಂದು ಹೇಳಿದರು.

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 10 ಎನ್ಆರ್‌ಐ ಕೋಟಾ ಜಾರಿಗೆ ತರುವ, ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರಕೋರ್ಸ್‌ ಶುಲ್ಕವನ್ನು ಶೇ 300-600 ಪ್ರಮಾಣದಲ್ಲಿ ಹೆಚ್ಚಿಸುವ ಕುರಿತು ಸರ್ಕಾರ ಪ್ರಸ್ತಾಪ ಮಾಡಿದೆ. ಹಾಗೆಯೇ, ಪದವಿ ಕೋರ್ಸುಗಳ ಶುಲ್ಕವನ್ನು ₹ 17 ಸಾವಿರದಿಂದ ₹ 50 ಸಾವಿರದ ವರೆಗೆ ಏರಿಸಲಾಗಿದೆ. ಸ್ನಾತಕೋತ್ತರಕೋರ್ಸ್‌ ಶುಲ್ಕವನ್ನು ₹ 40 ಸಾವಿರದಿಂದ ₹ 3.5 ಲಕ್ಷದ ತನಕ ಏರಿಸುವ ಪ್ರಸ್ತಾಪವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ADVERTISEMENT

ಮೈಸೂರು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ರಾಮಕೃಷ್ಣ, ಶಾಹಿದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.