ADVERTISEMENT

ಮಕ್ಕಳ ಶಾಲಾ ದಾಖಲಾತಿ ಪ್ರಕ್ರಿಯೆ ಇಲ್ಲ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2020, 14:33 IST
Last Updated 26 ಮಾರ್ಚ್ 2020, 14:33 IST

ಮಡಿಕೇರಿ: ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ರಜೆ ನೀಡಿ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ. ಆದರೂ, ಅನೇಕ ಖಾಸಗಿ ಶಾಲೆಗಳು 2020-21ನೇ ಸಾಲಿನ ದಾಖಲಾತಿಯನ್ನು ಮಾರ್ಚ್ 31ರ ಒಳಗೆ ಶುಲ್ಕ ಪಾವತಿ ಮಾಡಿಕೊಳ್ಳಬೇಕೆಂದು ಪೋಷಕರಿಗೆ ಒತ್ತಾಯಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಸದ್ಯಕ್ಕೆ ದಾಖಲಾತಿ ಮಾಡಿಕೊಳ್ಳುವಂತಿಲ್ಲ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಿ.ಎಸ್‌.ಮಚ್ಚಾಡೋ ತಿಳಿಸಿದ್ದಾರೆ.

ಶಾಲಾ ಆಡಳಿತ ಮಂಡಳಿಗಳು ಸೂಚನೆ ಪಾಲಿಸದೇ ನಿಯಮ ಉಲ್ಲಂಘಿಸಿದರೆ ಸಾಂಕ್ರಾಮಿಕ ರೋಗಗಳ ಅಧಿನಿಯಮ 1897ರ ಸೆಕ್ಷನ್ 3ರಂತೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳು 2020-21ನೇ ಸಾಲಿನ ಮಕ್ಕಳ ದಾಖಲಾತಿಯನ್ನು ಸರ್ಕಾರದ ಮುಂದಿನ ಆದೇಶದವರೆಗೆ ಮುಂದೂಡುವುದು. ಯಾವುದೇ ಕಾರಣಕ್ಕೂ ದಾಖಲಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತಿಲ್ಲ. ಯಾವುದೇ ಸರ್ಕಾರಿ/ ಅನುದಾನಿತ/ ಅನುದಾನ ರಹಿತ ಶಾಲೆಗಳಲ್ಲಿ ಪೋಷಕರು, ವಿದ್ಯಾರ್ಥಿಗಳು ಶಾಲೆಗಳಿಗೆ ಯಾವುದೇ ಕಾರ್ಯದ ನಿಮಿತ್ತ ಭೇಟಿ ನೀಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.