ADVERTISEMENT

ವಿಶ್ವನಾಥ್‌ ವಿರುದ್ಧವೇ ತಿರುಗಿಬಿದ್ದ ಗಣೇಶ್‌

ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಜೆಡಿಎಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 13:17 IST
Last Updated 12 ಜುಲೈ 2019, 13:17 IST
ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕೊಡಗು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಕೊಡಗು ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಮಡಿಕೇರಿ: ‘ಜೆಡಿಎಸ್ ರಾಜ್ಯ ಅಧ್ಯಕ್ಷರಾಗಿದ್ದ ಅಡಗೂರು ಎಚ್. ವಿಶ್ವನಾಥ್ ಪಕ್ಷದ್ರೋಹದಲ್ಲಿ ಭಾಗಿಯಾಗಿ ಮೈತ್ರಿ ಸರ್ಕಾರವನ್ನೇ ಅಸ್ಥಿರಗೊಳಿಸಲು ಹೊರಟಿದ್ದಾರೆ. ಇದು ಕ್ಷಮಿಸಲಾರದ ಅಪರಾಧ’ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಕೆ.ಎಂ.ಬಿ. ಗಣೇಶ್ ಆರೋಪಿಸಿದರು.

ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಲು ಮೈತ್ರಿ ಇನ್ನಷ್ಟು ಶಾಸಕರು ಅತೃಪ್ತರ ಬಣಕ್ಕೆ ಸೇರಿಕೊಳ್ಳುತ್ತಿರುವುದು ನಾಚಿಗೇಡಿನ ವಿಚಾರ. ಜೆಡಿಎಸ್‌ನ ಮೂರು ಶಾಸಕರ ಪೈಕಿ ಗೌರವ ಸ್ಥಾನದಲ್ಲಿದ್ದ ವಿಶ್ವನಾಥ್ ಅವರ ನಡೆ ನಿಜಕ್ಕೂ ಬೇಸರವಾಗಿದೆ’ ಎಂದು ಗಣೇಶ್‌ ಅವರೇ ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

ಜೆಡಿಎಸ್‌ನ ಮೂವರು ಶಾಸಕರೂ ಕೂಡ ರಾಜಕಾರಣದ ಅನುಭವಿಗಳು. ಇದೀಗ ಪಕ್ಷಕ್ಕೆ ಅನ್ಯಾಯ ಮಾಡುವ ಮೂಲಕ ಬೆಂಬಲಿಸಿದ ಕಾರ್ಯಕರ್ತರಿಗೂ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕೀಳುಮಟ್ಟದ ರಾಜಕೀಯ ವ್ಯವಸ್ಥೆ ಅಡಿ ರಾಜೀನಾಮೆ ನೀಡಿರುವ ಶಾಸಕರ ನಡೆಯನ್ನು ನಂಬಲು ಅಸಾಧ್ಯವಾಗದ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಜನರೇ ತಕ್ಕಪಾಠವನ್ನು ಕಲಿಸಬೇಕು ಎಂದು ಗಣೇಶ್ ಆಗ್ರಹಿಸಿದರು.

ರಾಜ್ಯದಲ್ಲಿ ಜೆಡಿಎಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದಲೇ ಚುನಾವಣೆ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿ, ಮೈತ್ರಿಗೆ ಬೆಂಬಲ ನೀಡಲಾಗಿತ್ತು. ಆದರೆ, ಇಂದು ನಮ್ಮ ಶಾಸಕರುಗಳೇ ರೆಸಾರ್ಟ್ ರಾಜಕಾರಣ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಶಾಸಕರೇ ಏಕಾಏಕಿ ಪಕ್ಷ ನಿಷ್ಠೆಯನ್ನು ಉಲ್ಲಂಘಿಸಿ ಬಿಜೆಪಿ ಜತೆಗೆ ಶಾಮೀಲು ಆಗಿದ್ದಾರೆ. ರಾಜಕೀಯ ವ್ಯವಸ್ಥೆಯಲ್ಲೇ ತಪ್ಪಾಗಿದೆ. ಹಿರಿಯ ರಾಜಕರಣಗಳೇ ಬಿಜೆಪಿಗೆ ಬೆಂಬಲ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌ ಕಾವೇರಿ ತಾಲ್ಲೂಕು ಅಧ್ಯಕ್ಷ ವಿಶ್ವ, ಮಡಿಕೇರಿ ಯುವ ಘಟಕ ಅಧ್ಯಕ್ಷ ರವಿ ಕಿರಣ್ ರೈ, ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಖಜಾಂಜಿ ಡೆನ್ನಿ ಬರೋಸ್, ಜಿಲ್ಲಾ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶಾಂತಿ ಅಪ್ಪಚ್ಚು, ವಿರಾಜಪೇಟೆ ನಗರಾಧ್ಯಕ್ಷ ಮಂಜು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.