ADVERTISEMENT

ಶಿಕ್ಷಕರು ಮೌಲ್ಯಯುತ ಪ್ರಜೆಗಳನ್ನು ರೂಪಿಸುವವರು

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಿಕ್ಷಕರಿಗೆ ಸನ್ಮಾನ: ಸುನೀಲ್ ಸುಬ್ರಮಣಿ ಶ್ಲಾಘನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2019, 19:45 IST
Last Updated 1 ಡಿಸೆಂಬರ್ 2019, 19:45 IST
ಮಡಿಕೇರಿಯ ಡಿ.ದೇವರಾಜ ಅರಸು ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಯ ಸಾಧಕ ಶಿಕ್ಷಕರಿಗೆ ಗಣ್ಯರು ಸನ್ಮಾನಿಸಿದರು
ಮಡಿಕೇರಿಯ ಡಿ.ದೇವರಾಜ ಅರಸು ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಯ ಸಾಧಕ ಶಿಕ್ಷಕರಿಗೆ ಗಣ್ಯರು ಸನ್ಮಾನಿಸಿದರು   

ಮಡಿಕೇರಿ: ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಜಿಲ್ಲೆ ಸಾಧಕ ಶಿಕ್ಷಕರಿಗೆ ರಾಜ್ಯೋತ್ಸವ ಶಿಕ್ಷಕ ಪುರಸ್ಕಾರ ನೀಡಿ ಗೌರವಿಸಲಾಯಿತು. 5 ಮಂದಿ ಶಿಕ್ಷಕರಿಗೆ ವಿಶೇಷ ಸನ್ಮಾನಕ್ಕೆ ಬಾಜನರಾದರು.

ನಗರದ ಡಿ.ದೇವರಾಜ ಅರಸು ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆಯ ಸಾಧಕ ಶಿಕ್ಷಕರಿಗೆ ಗಣ್ಯರು ಸನ್ಮಾನಿಸಿದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸುರೇಶ್ ಮರಕಾಲ, ಡಯಟ್ ಉಪನ್ಯಾಸಕ ಕೆ.ವಿ.ಸುರೇಶ್, ನಾಪೋಕ್ಲು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಡಾ.ಅವನಿಜ ಸೋಮಯ್ಯ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಡಾ.ಸದಾಶಿವಯ್ಯ ಎಸ್. ಪಲ್ಲೇದ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ ಅವರಿಗೆ ವಿಶೇಷ ಸನ್ಮಾನ ನೀಡಲಾಯಿತು.
ಪಿಲಿಪ್ ವಾಸ್, ಉ.ರಾ. ನಾಗೇಶ್ ಉಷಾರಾಣಿ ನೇತೃತ್ವದ ಸಮಿತಿ ಸಾಧಕ ಗುರುಗಳನ್ನು ಆಯ್ಕೆ ಮಾಡಿದ್ದರು.

ADVERTISEMENT

ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಮಡಿಕೇರಿ ಸರ್ಕಾರಿ ಮಹಿಳಾ ಪದವಿ ಕಾಲೇಜು ಪ್ರಾಧ್ಯಾಪಕಿ ಡಾ.ಕೋರನ ಸರಸ್ವತಿ, ವಿರಾಜಪೇಟೆ ಕಾವೇರಿ ಕಾಲೇಜು ಉಪನ್ಯಾಸಕಿ ಡಾ.ಮುಲ್ಲೆಂಗಡ ರೇವತಿ ಪೂವಯ್ಯ, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಪ್ರೊ.ಜ್ಯೋತಿ, ಬಾಳೆಲೆ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಅಶ್ವಿನ್‌ಕುಮಾರ್, ಭಾಗಮಂಡಲ ಕಾವೇರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ದಿವಾಕರ್, ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ತಿಲೋತ್ತಮೆ, ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಈಶ ಅವರಿಗೆ ಪುರಸ್ಕಾರ ನೀಡಲಾಯಿತು.

ಪ್ರೌಢಶಾಲಾ ವಿಭಾಗದಲ್ಲಿ ಹೆಬ್ಬಾಲೆ ಪ್ರೌಢಶಾಲೆ ಶಿಕ್ಷಕ ವೆಂಕಟ್‌ನಾಯಕ್, ಕೊಡ್ಲಿಪೇಟೆ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಎಂ.ಎಸ್. ಅಬ್ದುಲ್ ರಬ್, ಮೂರ್ನಾಡು ಪ್ರೌಢಶಾಲೆ ಶಿಕ್ಷಕ ಪ್ರಶಾಂತ್, ಪೊನ್ನಂಪೇಟೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕಿ ನೂತನ್‌ಕುಮಾರ್, ಕುಶಾಲನಗರ ಫಾತಿಮಾ ಪ್ರೌಢಶಾಲೆ ಶಿಕ್ಷಕಿ ಮಮತಾ ಕ್ರಾಸ್ತ ಅವರನ್ನು ಸನ್ಮಾನಿಸಲಾಯಿತು.

ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ನೆಲ್ಯಹುದಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಭಾರತಿ, ನ್ಯಾಯದಹಳ್ಳ ಹಿರಿಯ ಪ್ರಾಥಮಿಕ ಶಾಲೆ ದೈಹಿಕಮ ಶಿಕ್ಷಣ ಶಿಕ್ಷಕಿ ಜಿ.ಟಿ. ಕವಿತಾ, ನೆಲಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಪಿ.ಎಚ್. ಐಮದೆ, ಒಂಟಿಯಂಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಲೆ ಶಿಕ್ಷಕ ಮಂಜುನಾಥ್, ಪೆರಾಜೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಮೋಹನ್ ಪೆರಾಜೆ, ಹಟ್ಟಿಹೊಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಶಾಂತಶೀಲಾ, ಎಲಿಯಂಗಾಡ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಸುಬ್ರಹ್ಮಣ್ಯ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ, ದಾರಿ ತಪ್ಪುವವರಿಗೆ ಉತ್ತಮ ಮಾರ್ಗದರ್ಶನ ನೀಡಿ ಒಳ್ಳೆಯ ದಾರಿಯಲ್ಲಿ ನಡೆಸುವವರು ಗುರುಗಳು. ಗುರು ಹಾಕಿಕೊಟ್ಟ ಮಾರ್ಗದ ಮೇಲೆ ನಡೆದರೆ ಆದರ್ಶ ವ್ಯಕ್ತಿಯೆನಿಸಿಕೊಳ್ಳಬಹುದು. ಮೌಲ್ಯಯುತವಾದ ಪ್ರಜೆಗಳನ್ನು ಶಿಕ್ಷಕರು ತಯಾರು ಮಾಡುತ್ತಾರೆ ಎಂದು ಶ್ಲಾಘಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಮಾತನಾಡಿ, ವಿದ್ಯಾರ್ಥಿಗಳು ಕನ್ನಡದ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡವರು ಭ್ರಷ್ಟ ವ್ಯಕ್ತಿಯಾಗಲು ಸಾಧ್ಯವೇ ಇಲ್ಲ. ಕನ್ನಡ ಸಾಹಿತ್ಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಪ್ರತಿಯೊಂದು ಹಂತದಲ್ಲೂ ಮಾರ್ಗದರ್ಶನ ನೀಡುವ ಗುರುಗಳಿಗೆ ವಿದ್ಯಾರ್ಥಿಗಳು ಗೌರವ ನೀಡಬೇಕು ಎಂದು ಹೇಳಿದರು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಮಠಾಧೀಶ ಸದಾಶಿವ ಸ್ವಾಮೀಜಿ ಮಾತನಾಡಿ, ಶಿಕ್ಷಕರು- ಚಿಕಿತ್ಸಕರು- ರಕ್ಷಕರು ಒಳ್ಳೆಯವರಾಗಿದ್ದಲ್ಲಿ ದೇಶ ಚೆನ್ನಾಗಿರುತ್ತದೆ. ಸಮಾಜ ತಿದ್ದುವ ಜವಾಬ್ದಾರಿ ಶಿಕ್ಷಕರದ್ದಾಗಿದೆ. ಪುರಸ್ಕೃತ ಶಿಕ್ಷಕರು ಇತರ ಶಿಕ್ಷಕರಿಗೆ ಮಾದರಿ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.