ಎ.ಎಸ್.ಪೊನ್ನಣ್ಣ
ಮಡಿಕೇರಿ: ವನ್ಯಜೀವಿಗಳ ವಸ್ತುಗಳು, ಪ್ರಾಣಿ ವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಕುರಿತು ರಂಜಿ ಪೂನಚ್ಚ ಮತ್ತು ಕುಟ್ಟಪ್ಪ ಅವರು ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಸದ್ಯ, ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹಾಗಾಗಿ, ಸಾರ್ವಜನಿಕರು ಯಾವುದೇ ಬಗೆಯ ಆತಂಕಪಡುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.